ಬೆಂಗಳೂರು,ಜು.3- ಬಾಕಿ ಇರುವ ಸಾವಿರಾರು ಕೋಟಿ ರೂ. ಬಿಲ್ ಬಿಡುಗಡೆಗೆ ಒತ್ತಾಯಿಸಿ ಗುತ್ತಿಗೆದಾರರು ಜು.8 ರಿಂದ ತಮ ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.
ಬಿಬಿಎಂಪಿ ಗುತ್ತಿಗೆದಾರರ ಸಂಘದ ಸಭೆಯಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಧೋರಣೆಗೆ ಆಕ್ರೋಶ ವ್ಯಕ್ತಪಡಿಸಿದ ಗುತ್ತಿಗೆದಾರರು ಜು.8ರಿಂದ ಮುಷ್ಕರ ನಡೆಸಲು ಸಮತಿ ಸೂಚಿಸಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ದ ಗುತ್ತಿಗೆದಾರರ ಬಂಡಾಯ..
ನಂದಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಗುತ್ತಿಗೆದಾರರ ಸಭೆಯಲ್ಲಿ ವಾರ್ಡ್ ಕಾಮಗಾರಿ.ರಸ್ತೆ,ವೈಟ್ ಟಾಪಿಂಗ್ ಮಳೆ ನೀರು ಕಾಲುವೆ .ಕೆರೆ ಸೇರಿದಂತೆ ಎಲ್ಲ ರೀತಿಯ ಕಾಮಗಾರಿ ಸ್ಥಗಿತಗೊಳಿಸಲು ನಿರ್ಧರಿಸಲಾಗಿದೆ.
ಗುತ್ತಿಗೆದಾರರ 1,600 ಕೋಟಿ ಬಿಲ್ ಬಾಕಿ ಉಳಿಸಿಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ತಮ ಸಮಸ್ಯೆಗಳಿಗೆ ಸ್ಪಂದಿಸದ ಕಾರಣ ಈ ತೀರ್ಮಾನ ಕೈಗೊಳ್ಳಬೇಕಾಯಿತು ಎಂದು ನಂದಕುಮಾರ್ ಮಾಹಿತಿ ನೀಡಿದ್ದಾರೆ.