ಭೀಕರ ಪ್ರವಾಹದ ಹಿನ್ನೆಲೆಯಲ್ಲಿ ಈ ವರ್ಷ ಸರಳ ಸ್ವಾತಂತ್ರ್ಯೋತ್ಸವ ಆಚರಣೆ

ಬೆಂಗಳೂರು,ಆ.13- ರಾಜ್ಯದಲ್ಲಿ ಈ ಬಾರಿ ಭೀಕರ ಪ್ರವಾಹ ಉಂಟಾಗಿ ಸಾವುನೋವು ಸಂಭವಿಸಿ ನಷ್ಟ ಉಂಟಾಗಿರುವ ಹಿನ್ನಲೆಯಲ್ಲಿ ಆ.15ರ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಗುರುವಾರದಂದು ಬೆಂಗಳೂರು ನಗರ ಹೊರತು ಪಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರ ಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು(ಡಿಸಿ) ಧ್ವಜಾರೋಹಣ ನೆರವೇರಿಸಬೇಕೆಂದು ಸೂಚಿಸ ಲಾಗಿದೆ. ಉಪವಿಭಾಗಗಳಲ್ಲಿ ಉಪವಿಭಾಗಾಧಿಕಾರಿಗಳು(ಎಸಿ), ತಾಲ್ಲೂಕು ಮಟ್ಟದಲ್ಲಿ ತಹಸೀಲ್ದಾರರು ಧ್ವಜಾರೋಹಣ ನೆರವೇರಿಸಬೇಕು.

ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿರುವು ದರಿಂದ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್. ವಿಜಯಭಾಸ್ಕರ್ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯಕರ್ನಾಟಕ ಸೇರಿದಂತೆ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳ 86 ತಾಲ್ಲೂಕುಗಳಲ್ಲಿ ನಾಲ್ಕೂವರೆ ದಶಕಗಳ ನಂತರ ಭಾರೀ ಮಳೆಯಿಂ ದಾಗಿ ಭೀಕರ ಪ್ರವಾಹ ಉಂಟಾಗಿ ಊಹೆಗೂ ನಿಲುಕದ ರೀತಿಯಲ್ಲಿ ನಷ್ಟ ಸಂಭವಿಸಿದೆ.