ಮಾಣಿಕ್ ಷಾ ಪೆರೇಡ್ ಮೈದಾನಲ್ಲಿ ಮೇಳೈಸಿದ ಸಾಂಸ್ಕೃತಿಕ ಕಾರ್ಯಕ್ರಮ

Social Share

ಬೆಂಗಳೂರು,ಆ.15- 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕøತಿಕ ಕಾರ್ಯಕ್ರಮಗಳು ನೋಡುಗರ ಕಣ್ಮನ ಸೆಳೆದವು. ಕಳೆದ ಎರಡು ವರ್ಷಗಳಿಂದ ಕೋವಿಡ್ ಕಾರಣದಿಂದ ಕೇವಲ ಧ್ವಜಾರೋಹಣಕ್ಕೆ ಮಾತ್ರ ಸ್ವಾತಂತ್ರ್ಯೋತ್ಸವ ಸೀಮಿತವಾಗಿತ್ತು. ಆದರೆ ಈ ಬಾರಿ ಕೋವಿಡ್ ಕ್ಷೀಣಿಸಿದ್ದರಿಂದ ಸ್ವತಂತ್ರ್ಯೋತ್ಸವದ ಗೀತೆಗಳು ಮೊಳಗಿದವು.

ಬಿಬಿಎಂಪಿ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಇತಿಹಾಸ ಮರುಕಳಿಸುವ ದೃಶ್ಯಗಳು ಮೈನವಿರೇಳಿಸಿದವು. ಮುಖ್ಯಮಂತ್ರಿಗಳ ಭಾಷಣ ಮುಗಿಯುತ್ತಿದ್ದಂತೆ ಒಂದೊಂದೇ ತಂಡವಾಗಿ ಶಾಲಾ ಮಕ್ಕಳು ರಾಷ್ಟ್ರದ ಏಕತೆ, ವೈವಿಧ್ಯತೆ ಸಾರುವ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ನಾವೆಲ್ಲರೂ ಒಂದೇ ಎಂಬ ಸಂದೇಶವನ್ನು ಸಾರಿದರು.

ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮಗಳ ಜೊತೆಗೆ ಕೆಎಸ್‍ಆರ್‍ಪಿ, ಸಿಎಆರ್, ಸಂಚಾರಿ ನಿರ್ವಹಣೆ ತಂಡ, ಭಾರತೀಯ ವಾಯುಪಡೆ ಸೇರಿದಂತೆ ಮತ್ತಿತರರು ವಿವಿಧ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಸುಮಾರು 45 ನಿಮಿಷಕ್ಕೂ ಹೆಚ್ಚು ಕಾಲ ನಡೆದ ಈ ಸಾಂಸ್ಕøತಿಕ ಕಾರ್ಯಕ್ರಮಗಳು ವೀಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

Articles You Might Like

Share This Article