ಭಾರತದಲ್ಲಿ ಮತ್ತಷ್ಟು ಕಡಿಮೆಯಾಯ್ತು ಕೊರೊನಾ

Social Share

ಬೆಂಗಳೂರು,ಫೆ.6- ಭಾರತದಲ್ಲಿ 1.07,474 ಹೊಸ ಕೋವಿಡ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಒಟ್ಟಾರೆ ಕೊರೋನ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 4,21,88,138ಕ್ಕೆ ತಲುಪಿದೆ. ಸಕ್ರಿಯ ಪ್ರಕರಣಗಳು ಇನ್ನಷ್ಟು ಕಡಿಮೆಯಾಗಿದ್ದು 12,25,011ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಗ್ಗೆ ತಿಳಿಸಿದೆ. ನಿನ್ನೆ 865 ಮಂದಿ ಕೊರೊನಾದಿಂದ ಮೃತಪಟ್ಟಿದ್ದು ಒಟ್ಟು ಮೃತರ ಸಂಖ್ಯೆ ,5,01,979ಕ್ಕೆ ತಲುಪಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ ಒಟ್ಟಾರೆ ಪ್ರಕರಣಗಳ ಶೇ.2.90ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ.95.91ಕ್ಕೆ ಸುಧಾರಿಸಿದೆ.
ಕಳೆದ 24 ಗಂಟೆಗಳಲ್ಲಿ ಸಕ್ರಿಯ ಕೋವಿಡ್-19 ಪ್ರಕರಣಗಳಲ್ಲಿ 106637 ಪ್ರಕರಣಗಳಷ್ಟು ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಇಂದು ಮಾಹಿತಿ ನೀಡಿದೆ.

Articles You Might Like

Share This Article