Friday, July 19, 2024
Homeರಾಷ್ಟ್ರೀಯಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ಹಾವು-ಮುಂಗುಸಿಗಳ ಒಗ್ಗೂಡುವಿಕೆಯೇ ಇಂಡಿಯಾ ಮೈತ್ರಿಕೂಟ ; ತೇಜಸ್ವಿ ಸೂರ್ಯ

ನರ್ಮದಾಪುರಂ,ಅ.3-ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟ ಹಾವು ಮುಂಗುಸಿಗಳು ಒಗ್ಗೂಡುವಿಕೆಯಂತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ. ಇಂಡಿಯಾ ಮೈತ್ರಿ ರಚನೆಗೂ ಮುನ್ನ ಗುಟ್ಟಾಗಿ ಹಿಂದೂ ವಿರೋಧಿ ರಾಜಕಾರಣ ಮಾಡುತ್ತಿದ್ದ ಇವರು, ಜಾತ್ಯತೀತತೆಯ ಬುರ್ಖಾ ಹಾಕಿಕೊಂಡು ಹಿಂದೂ ವಿರೋಧಿ ಮತ್ತು ಭಾರತ ವಿರೋಧಿ ರಾಜಕಾರಣ ಮಾಡುತ್ತಿದ್ದರು.

ಆದರೆ ಇಂದು ಅವರು ಸನಾತನ ಸಂಸ್ಕøತಿ ಮತ್ತು ಸನಾತನ ಧರ್ಮದ ವಿರುದ್ಧ ಬಹಿರಂಗವಾಗಿ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ನರ್ಮದಾಪುರಂನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ತಂದೆಯಿಂದಲೇ ಅತ್ಯಾಚಾರ

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಲು ಇಂಡಿಯಾ ಒಕ್ಕೂಟವನ್ನು ರಚಿಸಲಾಗಿದೆ ಎಂದು ಡಿಎಂಕೆ ಹೇಳುತ್ತದೆ ಕಳೆದ ಸೆಪ್ಟೆಂಬರ್ 2 ರಂದು, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರರೂ ಆಗಿರುವ ಉದಯನಿಧಿ ಅವರು ಸನಾತನಾ ನಿರ್ಮೂಲನಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡುತ್ತಾ, ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ ಎಂದು ಹೇಳಿದ್ದರು.

ಇಂಡಿಯಾ ಮೈತ್ರಿಕೂಟದಿಂದ ಹೊರಬರುವುದೇ ಎಎಪಿ..?

ಅವರು ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಅಥವಾ ಕೊರೊನಾವೈರಸ್‍ನಂತಹ ಕಾಯಿಲೆಗಳಿಗೆ ಹೋಲಿಸಿದರು ಮತ್ತು ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕರೋನಾವನ್ನು ವಿರೋಧಿಸಲು ಸಾಧ್ಯವಿಲ್ಲ; ನಾವು ಅವುಗಳನ್ನು ನಿರ್ಮೂಲನೆ ಮಾಡಬೇಕು. ಅದು ಹೇಗೆ. ನಾವು ಸನಾತನವನ್ನು ನಿರ್ಮೂಲನೆ ಮಾಡುತ್ತೇವೆ, ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು ಎಂದಿದ್ದರು. ಇಂತಹ ಮಿತ್ರರನ್ನು ಹೊಂದಿರುವ ಇಂಡಿಯಾ ಮೈತ್ರಿಕೂಟ ಹಾವು-ಮುಂಗುಸಿಗಳಿಂದ ಕೂಡಿದ ಒಕ್ಕೂಟವಾಗಿದೆ ಎಂದು ಅವರು ಲೇವಡಿ ಮಾಡಿದ್ದಾರೆ.

RELATED ARTICLES

Latest News