Thursday, November 21, 2024
Homeರಾಷ್ಟ್ರೀಯ | Nationalದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಶಕ್ತಿ ಪ್ರದರ್ಶನ

ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿ ಇಂಡಿಯಾ ಒಕ್ಕೂಟ ಶಕ್ತಿ ಪ್ರದರ್ಶನ

ನವದೆಹಲಿ,ಮಾ.31- ಪ್ರಜಾಪ್ರಭುತ್ವ, ಸಂವಿಧಾನವನ್ನು ರಕ್ಷಿಸಿ, ದೇಶವನ್ನು ಉಳಿಸಿ ಧ್ಯೇಯದೊಂದಿಗೆ ಇಂಡಿಯಾ ರಾಜಕೀಯ ಒಕ್ಕೂಟ ದೆಹಲಿಯ ರಾಮ್‍ಲೀಲಾ ಮೈದಾನದಲ್ಲಿಂದು ಬೃಹತ್ ಶಕ್ತಿ ಪ್ರದರ್ಶನ ನಡೆಸಿದೆ.ಇಂಡಿಯಾ ಘಟ್‍ಬಂಧನ್‍ನಲ್ಲಿರುವ ವಿವಿಧ ರಾಜಕೀಯ ಪಕ್ಷಗಳ ನಾಯಕರು ರ್ಯಾಲಿಯಲ್ಲಿ ಭಾಗವಹಿಸಿದ್ದರು. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡು ವಿರೋಧಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ನಡೆಸುತ್ತಿದೆ ಎಂದು ವಿರೋಧಪಕ್ಷಗಳ ನಾಯಕರು ಕಿಡಿಕಾರಿದ್ದಾರೆ.

ಆಮ್‍ಆದ್ಮಿ, ಎಡಪಕ್ಷಗಳು, ಶಿವಸೇನೆ, ಸಮಾಜವಾದಿ ಪಕ್ಷ ಸೇರಿದಂತೆ ಹಲವು ಪಕ್ಷಗಳ ಮುಖಂಡರು ರ್ಯಾಲಿಯಲ್ಲಿ ಭಾಗವಹಿಸಿದ್ದರು.
ಜಾರ್ಖಂಡ್‍ನ ಮುಖ್ಯಮಂತ್ರಿ ಹೇಮಂತ್ ಸೊರೇನ್, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ತೀವ್ರವಾಗಿ ಖಂಡಿಸಲಾಯಿತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾಗಾಂ, ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂ, ಸಿಪಿಐನ ಡಿ.ರಾಜಾ, ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್, ಹೇಮಂತ್ ಸೊರೇನ್ ಅವರ ಪತ್ನಿ ಕಲ್ಪನಾ ಸೊರೇನ್, ಡಿಎಂಕೆ ಪಕ್ಷದ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ರಾಮ್‍ಲೀಲಾ ಮೈದಾನದಲ್ಲಿ ವಿವಿಧ ಪಕ್ಷಗಳ ಕಾರ್ಯಕರ್ತರು ತಮ್ಮ ಪಕ್ಷದ ಧ್ವಜಗಳನ್ನು ಪ್ರದರ್ಶಿಸಿದರು.

ದೆಹಲಿ ಮತ್ತು ಪಂಜಾಬ್‍ನ ಆಪ್ ಸರ್ಕಾರದ ಬಹುತೇಕ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ತಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಬಂಧನವನ್ನು ತೀವ್ರವಾಗಿ ವಿರೋಸಿದರು.ಕೇಂದ್ರ ಸರ್ಕಾರ ಸಿಬಿಐ, ಇಡಿ, ಆದಾಯ ತೆರಿಗೆ ಸೇರಿದಂತೆ ಕೇಂದ್ರೀಯ ಸ್ವಾಯತ್ತ ಹಾಗೂ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಪ್ರತಿಪಕ್ಷ ನಾಯಕರನ್ನು ಹತ್ತಿಕ್ಕಲು ಹಾಗೂ ಪ್ರಶ್ನಿಸುವವರ ಧ್ವನಿ ಅಡಗಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಮಾತನಾಡಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಜೆಪಿ, ಇಡಿ, ಸಿಬಿಐ ಮತ್ತು ಆದಾಯ ತೆರಿಗೆ ಅಕಾರಿಗಳನ್ನು ನಿಯೋಜಿಸಿಕೊಂಡು ಹೊಸ ವಿಚಾರಣೆ ಹೆಸರಿನಲ್ಲಿ ಚಂದಾ ವಸೂಲಿ ಮಾಡುವ ಕಾಳಜಿ ಹೊಂದಿದೆ. ಇಡೀ ಜಗತ್ತಿನಲ್ಲೇ ಬಿಜೆಪಿಯಷ್ಟು ಸುಳ್ಳು ಹೇಳುವವರು ಬೇರೆ ಯಾರೂ ಇಲ್ಲ. ಅರವಿಂದ್ ಕೇಜ್ರಿವಾಲ್ ಬಂಧನವನ್ನು ಅಮೇರಿಕಾ ಸೇರಿದಂತೆ ಜಗತ್ತಿನ ಬಹುತೇಕ ರಾಷ್ಟ್ರಗಳು ಖಂಡಿಸಿವೆ ಎಂದು ಹೇಳಿದರು.

ಡಿ.ರಾಜಾ ಮಾತನಾಡಿ, ಇದು ಬಹುಮುಖ್ಯವಾದ ಸಮಾವೇಶವಾಗಿದೆ. ಜಾರ್ಖಂಡ್ ಮತ್ತು ದೆಹಲಿಯ ಮುಖ್ಯಮಂತ್ರಿಗಳನ್ನು ಬಂಸಿರುವ ಕೇಂದ್ರ ಸರ್ಕಾರ ಹೇಮಂತ್ ಸೊರೇನ್ ಅವರನ್ನು ಬಲವಂತವಾಗಿ ಅಕಾರದಿಂದ ಕೆಳಗಿಳಿಯುವಂತೆ ಮಾಡಲಾಯಿತು. ಹಾಲಿ ಮುಖ್ಯಮಂತ್ರಿಗಳನ್ನು ಬಂಸುವ ಮೂಲಕ ಚುನಾವಣಾ ಸಮಯದಲ್ಲೂ ವಿಪಕ್ಷಗಳನ್ನು ಹೆದರಿಸುವ ಪ್ರಯತ್ನ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲಿನ ಆಕ್ರಮಣ ಎಂದು ಹೇಳಿದರು.

RELATED ARTICLES

Latest News