ನವದೆಹಲಿ,ಆ.5– ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವಿಷಯದ ಬಗ್ಗೆ ಸಂಸತ್ತಿನಲ್ಲಿ ಗದ್ದಲ ಹೆಚ್ಚುತ್ತಿದ್ದಂತೆ, ವಿರೋಧ ಪಕ್ಷ ಇಂಡಿಯಾ ಬಣದ ನಾಯಕರು ಆ. 7ರಂದು ಈ ವಿಷಯದ ಕುರಿತು ಭವಿಷ್ಯದ ಕಾರ್ಯತಂತ್ರವನ್ನು ನಿಶ್ಚಯಿಸಲು ಔತಣಕೂಟ ಸಭೆಯನ್ನು ನಡೆಸಲಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ .ವೇಣುಗೋಪಾಲ್, ಇದೇ 7 ರಂದು ದೆಹಲಿಯಲ್ಲಿ ನಾವು ಸಭೆ ಸೇರುತ್ತೇವೆ. ಇಂಡಿಯಾ ಮೈತ್ರಿಕೂಟದ ನಾಯಕರು ಅಲ್ಲಿ ಇರುತ್ತಾರೆ ಎಂದು ಹೇಳಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಈ ಔತಣಕೂಟ ಸಭೆಯನ್ನು ಆಯೋಜಿಸಲಿದ್ದಾರೆ. ದೆಹಲಿಯಲ್ಲಿ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿ ನಡೆಸುವ ಸಾಧ್ಯತೆಯಿದೆ. ಇದರಲ್ಲಿ ಅವರು 2024 ರ ಲೋಕಸಭಾ ಚುನಾವಣೆ ಮತ್ತು ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಚುನಾವಣಾ ಅಕ್ರಮಗಳ ಕುರಿತು ಚುನಾವಣಾ ಆಯೋಗದ ವಿರುದ್ಧ ಪುರಾವೆಗಳನ್ನು ಬಹಿರಂಗಪಡಿಸಬಹುದು ಎಂದು ಮೂಲಗಳು ತಿಳಿಸಿವೆ.
ಚುನಾವಣಾ ಅಕ್ರಮಗಳನ್ನು ಬಯಲಿಗೆಳೆಯುವುದನ್ನು ಅಣು ಬಾಂಬ್‌ಗೆ ಹೋಲಿಸಿದ್ದ ರಾಹುಲ್ ಗಾಂಧಿ, ಅದು ಶೀಘ್ರದಲ್ಲೇ ಬಹಿರಂಗಗೊಳ್ಳಲಿದೆ ಎಂದು ಹೇಳಿದ್ದರು.
ಗುರುವಾರದ ಸಭೆಯಲ್ಲಿ ಕಾಂಗ್ರೆಸ್ ತನ್ನ ತನಿಖೆ ಬಗ್ಗೆ ಇತರ ಮೈತ್ರಿ ಪಕ್ಷಗಳೊಂದಿಗೆ ಚರ್ಚಿಸಬಹುದು. ಸಭೆಯಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹಾಜರಾತಿಯನ್ನು ದೃಢಪಡಿಸಿದ ಪಕ್ಷದ ನಾಯಕ ಮತ್ತು ರಾಜ್ಯಸಭಾ ಸಂಸದ ಸಂಜಯ್ ರಾವತ್, ರಾಹುಲ್ ಗಾಂಧಿ ಅವರು ಸಭೆಗೆ ಉದ್ಧವ್ ಠಾಕ್ರೆ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾರೆ ಎಂದು ಹೇಳಿದರು.ಸೆಪ್ಟೆಂಬರ್ 9 ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಿಗದಿಯಾಗಿರುವುದರಿಂದ, ನಾಯಕರು ಜಂಟಿ ಅಭ್ಯರ್ಥಿಯ ಬಗ್ಗೆಯೂ ಚರ್ಚಿಸಲಿದ್ದಾರೆ.
ವಿರೋಧ ಪಕ್ಷಗಳು ಆ.8 ರಂದು ಚುನಾವಣಾ ಆಯೋಗದ ಕಚೇರಿಗೆ ಮೆರವಣಿಗೆ ನಡೆಸಲು ಯೋಜಿಸುತ್ತಿವೆ.ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಅಭಿಷೇಕ್ ಬ್ಯಾನರ್ಜಿ ಅವರನ್ನು ಲೋಕಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ನೇಮಿಸಿದ್ದಾರೆ. ಹಿರಿಯ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬದಲಾಯಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭಾ ಎರಡರಿಂದಲೂ ಎಲ್ಲಾ ಎಐಟಿಸಿ ಸಂಸದರೊಂದಿಗೆ ಇಂದು ವರ್ಚುವಲ್ ಸಭೆಯನ್ನು ಕರೆದಿದ್ದಾರೆ.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (08-08-2025)
- ವೋಟ್ ಚೋರಿ ಆರೋಪ : ಸಹಿ ಸಮೇತ ಮಾಹಿತಿ ನೀಡುವಂತೆ ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ
- ಒಳಮೀಸಲಾತಿ ಕುರಿತು ಆ.16ರಂದು ವಿಶೇಷ ಸಚಿವ ಸಂಪುಟ ಸಭೆ
- ಟ್ರಂಪ್ನಿಂದ ಆರ್ಥಿಕ ಬ್ಲ್ಯಾಕ್ಮೇಲ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ