Saturday, May 4, 2024
Homeರಾಷ್ಟ್ರೀಯಸಂಸದರ ಅಮಾನತು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಸಂಸದರ ಅಮಾನತು ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು,ಡಿ.22- ವಿರೋಧಪಕ್ಷಗಳ 143 ಕ್ಕೂ ಹೆಚ್ಚು ಸಂಸದರನ್ನು ಅಮಾನತು ಮಾಡಿ ಸಂಸತ್ ಕಲಾಪ ನಡೆಸಿದ್ದನ್ನು ಖಂಡಿಸಿ ಇಂದು ಕಾಂಗ್ರೆಸ್ ದೇಶದಾದ್ಯಂತ ಪ್ರತಿಭಟನೆ ನಡೆಸಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸಚಿವರು, ಪ್ರಮುಖ ನಾಯಕರು ಭಾಗವಹಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಸಂಸತ್ ಕಲಾಪದಲ್ಲಿ ಪ್ರಜಾಸತ್ತಾತ್ಮಕ ಚರ್ಚೆಗೆ ಅವಕಾಶ ನೀಡದೇ ವಿರೋಧಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಿದ್ದಲ್ಲದೆ ಅವರ ಅನುಪಸ್ಥಿತಿಯಲ್ಲಿ ಭಾರತೀಯ ನ್ಯಾಯಸಂಹಿತೆ, ಭಾರತೀಯ ನಾಗರಿಕ ಸುರಕ್ಷಾಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ ಹಾಗೂ ದೂರಸಂಪರ್ಕ ದಂತಹ ಪ್ರಮುಖ ಮಸೂದೆಗಳನ್ನು ಅಂಗೀಕರಿಸಲಾಗಿದೆ.

ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡಿದ್ದಕ್ಕೆ ಧನ್ಯವಾದ ; ಕಾಂಗ್ರೆಸ್

ಐಪಿಸಿ, ಸಿಆರ್‍ಪಿಸಿ ಮತ್ತು ಸಾಕ್ಷ್ಯ ಕಾಯಿದೆಗಳಿಗೆ ಪರ್ಯಾಯವಾಗಿ ರೂಪಿಸಲಾಗಿರುವ ಮೂರು ಭಾರತೀಯ ಮಸೂದೆಗಳನ್ನು ವಿಪಕ್ಷಗಳ ರಚನಾತ್ಮಕ ಅಭಿಪ್ರಾಯಗಳಿಲ್ಲದೆ ಅಂಗೀಕರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‍ನ ಬಹುತೇಕ ಸಂಸದರನ್ನು ಸದನದಿಂದ ಹೊರಗಿಟ್ಟು, ಕಾಯಿದೆ ರೂಪಿಸಿರುವುದು ಇದೇ ಸಂದರ್ಭದಲ್ಲಿ ಇತರ ಪಕ್ಷಗಳ ನಾಯಕರುಗಳನ್ನೂ ಕೂಡ ಅಮಾನತುಗೊಳಿಸಿರುವುದು ಸರ್ವಾಧಿಕಾರಿ ಧೋರಣೆ ಎಂದು ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Latest News