ನವದೆಹಲಿ,ಮೇ 7– ಕೇಂದ್ರ ಸರ್ಕಾರ ಇಂದು ಮುಂಜಾನೆ ಯುಎಸ್, ರಷ್ಯಾ, ಯುಕೆ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವಾರು ಪ್ರಮುಖ ದೇಶಗಳನ್ನು ಸಂಪರ್ಕಿಸಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ-ಕಾಶ್ಮೀರದ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ನಡೆಸಿದ ಮಿಲಿಟರಿ ದಾಳಿಯ ಬಗ್ಗೆ ವಿವರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಈ ದಾಳಿಗಳನ್ನು ನಡೆಸಲಾಯಿತು. ಭಾರತ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಲು ಹಿರಿಯ ಭಾರತೀಯ ಅಧಿಕಾರಿಗಳು ಹಲವಾರು ದೇಶಗಳಲ್ಲಿನ ತಮ್ಮ ಸಹವರ್ತಿಗಳೊಂದಿಗೆ ಮಾತನಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇವುಗಳಲ್ಲಿ ಅಮೆರಿಕ, ಬ್ರಿಟನ್, ಸೌದಿ ಅರೇಬಿಯಾ, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ರಷ್ಯಾ ಸೇರಿವೆ.ಭಾರತ ಮತ್ತು ವಿದೇಶಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಎರಡು ವಾರಗಳ ನಂತರ ಭಾರತ ಈ ಕ್ರಮ ಕೈಗೊಂಡಿದೆ.
25 ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆಯನ್ನು ಹತ್ಯೆ ಮಾಡಿದ ಅನಾಗರಿಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಈ ಕ್ರಮಗಳು ಬಂದಿವೆ ಎಂದು ರಕ್ಷಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.ಈ ದಾಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂಬ ಬದ್ಧತೆಗೆ ನಾವು ಬದ್ಧರಾಗಿದ್ದೇವೆ ಎಂದು ಅದು ಹೇಳಿದೆ.
ಹಲವು ದೇಶಗಳೊಂದಿಗೆ ಮಾಹಿತಿ ವಿನಿಮಯ
ಭಾರತವು ಇಂದು ನಸುಕಿನ ಜಾವವೇ ಅಮೆರಿಕ, ರಷ್ಯಾ, ಯುಕೆ ಮತ್ತು ಸೌದಿ ಅರೇಬಿಯಾ ಸೇರಿದಂತೆ ಹಲವು ಪ್ರಮುಖ ದೇಶಗಳನ್ನು ಸಂಪರ್ಕಿಸಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶೀರದಲ್ಲಿನ ಒಂಬತ್ತು ಭಯೋತ್ಪಾದಕ ಸ್ಥಳಗಳ ಮೇಲೆ ನಡೆಸಿದ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತಂತೆ ವಿವರಿಸಿದೆ ಎಂದು ಮೂಲಗಳು ತಿಳಿಸಿವೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಈ ದಾಳಿಗಳನ್ನು ನಡೆಸಲಾಗಿದೆ. ಭಾರತ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಲು ಹಿರಿಯ ಭಾರತೀಯ ಅಧಿಕಾರಿಗಳು ಹಲವಾರು ದೇಶಗಳಲ್ಲಿನ ತಮ ಸಹವರ್ತಿಗಳೊಂದಿಗೆ ಮಾತನಾಡಿದ್ದಾರೆ.