ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ

ಬೆಂಗಳೂರು,ಜೂ.3- ವಿಶ್ವದ ಗಮನಸೆಳೆದಿರುವ 18ನೇ ಲೋಕಸಭೆ ಚುನಾವಣೆಯ 542 ಕ್ಷೇತ್ರಗಳ ಮತ ಎಣಿಕೆ ನಾಳೆ ಭಾರೀ ಬಿಗಿ ಭದ್ರತೆಯಲ್ಲಿ ನಡೆಯಲಿದ್ದು, ಕೇಂದ್ರದಲ್ಲಿ ಅಧಿಕಾರ ಗದ್ದುಗೆ ಯಾರಿಗೆ ಎಂಬುದು ತೀರ್ಮಾನವಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಏಕಕಾಲಕ್ಕೆ ಮತ ಎಣಿಕೆ ನಡೆದು, ಮತದಾರ ಗ್ಯಾರಂಟಿಗೋ ಇಲ್ಲವೋ ಮೋದಿ ಗ್ಯಾರಂಟಿಗೋ ಅಚ್ಚು ಒತ್ತಿದ್ದಾನೋ ಎಂಬುದು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಆರಂಭದಲ್ಲಿ ಅಂಚೆ ಮತಗಳ ಎಣಿಕೆ ನಡೆದ ಬಳಿಕ ಇವಿಎಂಗಳ ಮತ ಎಣಿಕೆ ಆರಂಭವಾಗಲಿದೆ. ಮಧ್ಯಾಹ್ನ … Continue reading ನಾಳೆ ಲೋಕಸಭೆ ಚುನಾವಣೆ ಫಲಿತಾಂಶ : ಭಾರೀ ಬಿಗಿ ಭದ್ರತೆಯಲ್ಲಿ ಮತಎಣಿಕೆಗೆ ಸಿದ್ಧತೆ