Home ಅಂತಾರಾಷ್ಟ್ರೀಯ | International ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ

ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ

0
ಕೆಲವೇ ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲಿದೆ : ಪಾಕ್ ಸಚಿವ

ನವದೆಹಲಿ,ಏ.30-ಜಮ್ಮು ಮತ್ತು ಕಾಶ್ಮೀರದ ಪಹಲ್ಗಮ್‌ ಘಟನೆಯ ನಂತರ ಉಗ್ರರ ವಿರುದ್ದ ಕಾರ್ಯಾಚಾರಣೆ ನಡೆಸಲು ಸೇನಾ ಪಡೆಗಳಿಗೆ ಮುಕ್ತ ಸ್ವತಂತ್ರ್ಯ ನೀಡಿರುವ ಬೆನ್ನಲ್ಲೇ, ಮುಂದಿನ 24-36 ಗಂಟೆಗಳಲ್ಲಿ ಭಾರತ ಮಿಲಿಟರಿ ಕಾರ್ಯಾಚರಣೆ ನಡೆಸಲು ಯೋಜಿಸುತ್ತಿದೆ ಎಂದು ಪಾಕ್‌ ಸಚಿವ ಅತಾವುಲ್ಲಾ ತರಾರ್‌ ಹೇಳಿಕೆ ನೀಡಿದ್ದಾರೆ. ಅಲ್ಲದೇ, ಸೇನಾ ಕ್ರಮ ಕೈಗೊಂಡರೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಭಾರತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಭಾರತ ತೆಗೆದುಕೊಂಡಿರುವ ಕೆಲವು ಬಿಗಿಯಾದ ಕ್ರಮಗಳಿಂದ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. 24-36 ಗಂಟೆಯೊಳಗೆ ಭಾರತ ನಮ ಮೇಲೆ ದಾಳಿ ನಡೆಸಬಹುದು ಎಂದು ಪಾಕಿಸ್ತಾನ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಭಾರತ ಮಿಲಿಟರಿ ದಾಳಿಯನ್ನು ಯೋಜಿಸುತ್ತಿದೆ ಎಂದು ಸೂಚಿಸುವ ವಿಶ್ವಾಸಾರ್ಹ ಗುಪ್ತಚರ ಮಾಹಿತಿಯನ್ನು ನಾವು ಹೊಂದಿದ್ದೇವೆ ಎಂದು ಪಾಕ್‌ ಸಚಿವ ಅತ್ತೌಲ್ಲಾ ತರಾರ್‌ ಹೇಳಿದ್ದಾರೆ.

ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್‌ ಮುನೀರ್‌ ಅವರಿಗೆ ಬರೆದ ಪತ್ರದಲ್ಲಿ, ಲೆಫ್ಟಿನೆಂಟ್‌ ಜನರಲ್‌ ಉಮರ್‌ ಅಹದ್‌ ಬುಖಾರಿ ಅವರು ಕಳೆದ 72 ಗಂಟೆಗಳಲ್ಲಿ 250 ಅಧಿಕಾರಿಗಳು ಸೇರಿದಂತೆ 1,450 ಸೈನಿಕರು ರಾಜೀನಾಮೆ ನೀಡಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.
ಪಹಲ್ಗಾಮ್‌ ದಾಳಿಯ ನಂತರ, ಸುಮಾರು 5,000 ಸೈನಿಕರು ಮತ್ತು ಅಧಿಕಾರಿಗಳು ಪಾಕಿಸ್ತಾನಿ ಸೇನೆಯನ್ನು ತೊರೆದಿದ್ದಾರೆ. ರಾಜೀನಾಮೆಗಳಲ್ಲಿ 12 ನೇ ಕಾಪ್ರ್ಸ ಕ್ವೆಟ್ಟಾದಿಂದ 520, ಫೋರ್ಸ್‌ ಕಮಾಂಡ್‌ ಉತ್ತರ ಪ್ರದೇಶಗಳಿಂದ 380 ಮತ್ತು ಫ್ಟ್‌‍ ಕಾಪ್ರ್ಸ ಮಂಗ್ಲಾದಿಂದ 550 ಸೇರಿವೆ ಎಂದು ವರದಿಯಾಗಿದೆ.

ಭಾರತ ಸ್ವತಃ ತಾನೇ ತೀರ್ಪುಗಾರನಂತೆ ವರ್ತಿಸುತ್ತಿದೆ. ಜವಾಬ್ದಾರಿಯುತ ರಾಷ್ಟ್ರವಾಗಿ ಸತ್ಯವನ್ನು ಖಚಿತಪಡಿಸಿಕೊಳ್ಳಲು ತಜ್ಞರ ಆಯೋಗಕ್ಕೆ ವಿಶ್ವಾಸಾರ್ಹ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಲು ಪಾಕಿಸ್ತಾನ ಮುಕ್ತ ಅವಕಾಶ ನೀಡಿದೆ. ಪಾಕಿಸ್ತಾನವು ಭಯೋತ್ಪಾದನೆಯ ಬಲಿಪಶುವಾಗಿದೆ ಎಂದು ತರಾರ್‌ ಮಾತನಾಡಿದ್ದಾರೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ತೆಗೆದುಕೊಂಡ ಹಲವಾರು ಕ್ರಮಗಳ ನಂತರ ಗಡಿಯುದ್ದಕ್ಕೂ ಉದ್ವಿಗ್ನತೆ ಹೆಚ್ಚಾಯಿತು. ಭಾರತವು 1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿದೆ. ಏಪ್ರಿಲ್‌ 27 ರಿಂದ ಪಾಕಿಸ್ತಾನಿ ಪ್ರಜೆಗಳಿಗೆ ನೀಡಲಾದ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿದೆ. ಅಟ್ಟಾರಿ ಭೂ-ಸಾರಿಗೆ ಪ್ಟೋ್‌ ಅನ್ನು ತಕ್ಷಣವೇ ಮುಚ್ಚಿತು.

2019 ರಲ್ಲಿ 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ನಡೆದ ಅತಿದೊಡ್ಡ ಭಯೋತ್ಪಾದಕ ದಾಳಿಗಳಲ್ಲಿ ಇದು ಒಂದಾಗಿದೆ. ಆದಾಗ್ಯೂ, ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಾವುನೋವುಗಳ ಸಂಖ್ಯೆಯನ್ನು ಸರ್ಕಾರ ಇನ್ನೂ ಅಧಿಕತವಾಗಿ ದಢಪಡಿಸಿಲ್ಲ. ಭದ್ರತಾ ಪಡೆಗಳು ಹೊಣೆಗಾರರಾದ ಭಯೋತ್ಪಾದಕರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದವು.

ದಾಳಿಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನೊಂದೆಡೆ ಪ್ರಧಾನಿ ಶಹಬಾಜ್‌ ಷರೀಫ್‌? ಸಹೋದರ ನವಾಜ್‌ ಷರೀಫ್‌? ಭಾರತದೊಂದಿಗೆ ಯುದ್ಧ ಮಾಡದಂತೆ ಸಲಹೆ ನೀಡಿದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ಮಂಗಳವಾರ ಪ್ರಧಾನಿ ನರೇಂದ್ರ ನಿವಾಸದಲ್ಲಿ ಮಹತ್ವದ ಸಭೆ ನಡೆಸಿತ್ತು, ಸೇನಾ ಮುಖ್ಯಸ್ಥರು, ರಕ್ಷಣಾ ಸಚಿವ ರಾಜನಾಥ್‌? ಸಿಂಗ್‌ ಭಾಗಿಯಾಗಿದ್ದರು. ಉಗ್ರರನ್ನು ಸದೆಬಡಿಯನು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗಿದೆ.

ಕಳೆದ ವಾರ ನಾಗರಿಕರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ಮುಂದಿನ ಮಿಲಿಟರಿ ಕ್ರಮಕ್ಕೆ ನೆಪವಾಗಿ ಬಳಸಲು ಭಾರತ ಉದ್ದೇಶಿಸಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್‌ ಹೇಳಿದ್ದಾರೆ.

ಪಹಲ್ಗಾಮ್‌ ಉಗ್ರರ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿದೆ ಎಂಬ ಆಧಾರರಹಿತ ಮತ್ತು ಕಪೋಲಕಲ್ಪಿತ ಆರೋಪಗಳ ನೆಪದಲ್ಲಿ ಭಾರತ ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನದ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಉದ್ದೇಶಿಸಿದೆ ಎಂಬ ವಿಶ್ವಾಸಾರ್ಹ ಗುಪ್ತಚರ ಮಾಹಿತಿ ಪಾಕಿಸ್ತಾನಕ್ಕೆ ಇದೆ ಎಂದು ಅತ್ತೌಲ್ಲಾ ತರಾರ್‌ ಸೋಶಿಯಲ್‌ ಮೀಡಿಯಾ ಎಕ್‌್ಸನಲ್ಲಿ ಬರೆದಿದ್ದು, ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಪಹಲ್ಗಾಮ್‌ ದಾಳಿಯ ಕುರಿತು ತಟಸ್ಥ ಆಯೋಗದಿಂದ ವಿಶ್ವಾಸಾರ್ಹ, ಪಾರದರ್ಶಕ ಮತ್ತು ಸ್ವತಂತ್ರ ತನಿಖೆಗೆ ಇಸ್ಲಾಮಾಬಾದ್‌ ಸಹಕರಿಸಲು ಸಿದ್ಧವಾಗಿದೆ ಎಂದು ಸಚಿವ ಹೇಳಿದ್ದು, ಭಾರತದ ಯಾವುದೇ ಮಿಲಿಟರಿ ಸಾಹಸಕ್ಕೆ ಖಚಿತವಾಗಿ ಮತ್ತು ನಿರ್ಣಾಯಕವಾಗಿ ಪ್ರತಿಕ್ರಿಯಿಸಲಾಗುವುದು ಎಂದು ಪಾಕಿಸ್ತಾನ ಪುನರುಚ್ಚರಿಸುತ್ತದೆ. ಅಂತರರಾಷ್ಟ್ರೀಯ ಸಮುದಾಯವು ಜಾಗರೂಕರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಏಪ್ರಿಲ್‌ 22ರಂದು ನಡೆದ ಜಮು ಮತ್ತು ಕಾಶೀರದ ಪಹಲ್ಗಾಮ್‌ ದಾಳಿಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತ ಮಟ್ಟದ ಭದ್ರತಾ ಸಭೆ ಮಂಗಳವಾರ ನಡೆಯಿತು. ಸಭೆಯಲ್ಲಿ ಪ್ರಧಾನಿ ಮೋದಿ ಅವರು ಮೂರು ಸೇನೆಗಳ ಮುಖ್ಯಸ್ಥರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್‌ ಚೌಹಾಣ್‌‍, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರೊಂದಿಗೆ ಸಭೆ ನಡೆಸಿದ್ದಾರೆ.

ಈ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಮತ್ತು ಮೂರು ಸೇವೆಗಳ ಮುಖ್ಯಸ್ಥರು ಭಾಗವಹಿಸಿದ್ದರು, ಉನ್ನತ ಮಟ್ಟದ ಸಭೆಯಲ್ಲಿ, ಭಯೋತ್ಪಾದನೆಗೆ ಹೀನಾಯ ಹೊಡೆತ ನೀಡುವುದು ರಾಷ್ಟ್ರೀಯ ಸಂಕಲ್ಪ ಎಂದು ಮೋದಿ ದಢಪಡಿಸಿದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ಇದೆೞ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉನ್ನತ ರಕ್ಷಣಾ ಸಂಸ್ಥೆಯ ಅಧ್ಯಕ್ಷತೆಯಲ್ಲಿ ಪ್ರತಿಪಾದಿಸಿದರು. ಅಂತೆಯೇ ಸಶಸ್ತ್ರ ಪಡೆಗಳ ವೃತ್ತಿಪರ ಸಾಮಥ್ರ್ಯಗಳಲ್ಲಿ ಮೋದಿ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.