ನೆಹರೂ ಕಾರ್ಯಗಳನ್ನು ಶ್ಲಾಘಿಸಿದ ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ನ.14- ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆ ಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ ಎಂದರು.

ಪಂಡಿತ್ ಜವಾಹರಲಾಲ್ ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು ಎಂದು ಸ್ಮರಿಸಿದರು.

ಟರ್ಕಿ ರಾಜಧಾನಿ ಇಸ್ತಾನ್‍ಬುಲ್‍ನಲ್ಲಿ ಬಾಂಬ್ ಸ್ಪೋಟ, 6 ಮಂದಿ ಸಾವು

ಭಾರತದ ಮೊದಲ ಪ್ರಧಾನಿಯಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಅಡಿಪಾಯ ಹಾಕಿದವರು. ಅಂತಾರಾಷ್ಟ್ರೀಯ ಮಟ್ಟದಲ್ಲಿ ನಾನ್ ಅಲೈನ್ಮೆಂಟ್ ಮೂವ್‍ಮೆಂಟ್ ಗೆ ಜನರಲ್ ಕಿಟೋ ಅವರೊಂದಿಗೆ ಸೇರಿ ಅವರು ಮಾಡಿದ ಕೆಲಸ ಅದ್ಭುತ ಎಂದು ಹೇಳಿದರು.

ಅಲಿಪ್ತ ಚಳುವಳಿ ಸಂಘದ ಮೂಲಕ ಭಾರತ ಇಂದಿಗೂ ತನ್ನ ಪ್ರಮುಖ ಪಾತ್ರವನ್ನು ವಹಿಸಿದೆ. ನೆಹರು ಅವರು ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.

ಕಡಲೆಕಾಯಿ ಪರಿಷೆಯಲ್ಲಿ ಬಡವರ ಬಾದಾಮಿ ಸವಿದ ಬೆಂಗಳೂರಿಗರು

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.

Articles You Might Like

Share This Article