ನವದೆಹಲಿ, ಫೆ.5- ಆಫ್ಘಾನಿಸ್ತಾನದಲ್ಲಿ ಭಾರತ ಸುಮಾರು ಮೂರು ಬಿಲಿಯನ್ ಡಾಲರ್ ಬಂಡವಾಳ ಹೂಡಿಕೆ ಮಾಡಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.
ಸಂಸದರ ಪ್ರಶ್ನೆಗೆ ಉತ್ತರ ನೀಡಿರುವ ಕೇಂದ್ರ ಸಚಿವರು, ಆಫ್ಘಾನಿಸ್ತಾನದ 34 ಪ್ರಾಂತ್ಯಗಳಲ್ಲೂ ಭಾರತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದೆ. ನೀರು ಪೂರೈಕೆ, ರಸ್ತೆ ಸಂಪರ್ಕ, ಆರೋಗ್ಯ ಕ್ಷೇತ್ರ, ಶಿಕ್ಷಣ, ಕೃಷಿ ಮತ್ತು ಸಾಮಥ್ರ್ಯ ವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ 500ಕ್ಕೂ ಹೆಚ್ಚು ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ್ದಾರೆ.
