ಭಾರತ-ಜಪಾನ್ ಬಾಂಧವ್ಯ ಪ್ರತಿಯೊಂದು ಕ್ಷೇತ್ರದಲ್ಲೂ ಗಾಢವಾಗಿದೆ : ಮೋದಿ

Spread the love

ನವದೆಹಲಿ, ಏ.28-ಭಾರತ-ಜಪಾನ್ ಬಾಂಧವ್ಯ ಪ್ರತಿಯೊಂದು ಕ್ಷೇತ್ರದಲ್ಲೂ ಗಾಢವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ 1952ರ ಏಪ್ರಿಲ್ 28ರಂದು ಭಾರತ ಮತ್ತು ಜಪಾನ್ ರಾಜತಾಂತ್ರಿಕ ಸಂಬಂಧಗಳು ಶುರುವಾದವು. ರಾಜತಾಂತ್ರಿಕ ಸಂಬಂಧ ಸ್ಥಾಪನೆಯಾಗಿ 70 ವರ್ಷವಾದ ಕುರಿತು ಟ್ವೀಟ್ ಮಾಡಿರುವ ಮೋದಿ ಅವರು, ಎರಡು ದೇಶಗಳ ನಡುವೆ ಆರ್ಥಿಕವಾಗಿ ಮತ್ತು ಜನರ ನಡುವೆ ಬಾಂಧವ್ಯಗಳು ಗಾಢವಾಗಿವೆ ಎಂದು ಹೇಳಿದ್ದಾರೆ.

ವಾರ್ಷಿಕ ಶೃಂಗಸಭೆಗಾಗಿ ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿಡಾ ಅವರು ಇತ್ತೀಚೆಗೆ ಭಾರತಕ್ಕೆ ಭೇಟಿ ನೀಡಿದ್ದು, ಕೋವಿಡ್ ನಂತರದ ಜಗತ್ತಿನಲ್ಲಿ ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಗಟ್ಟಿ ಗೊಳಿಸುವ ಮಾರ್ಗಸೂಚಿಯನ್ನು ರೂಪಿಸಿದೆ. ಕಿಶಿದಾ ಅವರೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸಲಾಗುವುದು ಎಂದರು.

ಭಾರತ ಮತ್ತು ಜಪಾನ್ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70 ನೇ ವರ್ಷವನ್ನು ಆಚರಿಸುತ್ತಿರುವಾಗ, ನಮ್ಮ ಬಾಂಧವ್ಯಗಳು ಕಾರ್ಯತಂತ್ರ, ಆರ್ಥಿಕವಾಗಿ ಪ್ರತಿಯೊಂದು ಕ್ಷೇತ್ರದಲ್ಲೂ ಗಾಢವಾಗಿರುವುದನ್ನು ನೋಡಲು ಸಂತೋಷವಾಗಿದೆ ಎಂದಿದ್ದಾರೆ.

Facebook Comments