ನವದೆಹಲಿ,ಡಿ.13-ಯುನೈಟೆಡ್ ಅರಬ್ ಎಮಿರೇಟ್ಸ್ ಉಪಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅವರೊಂದಿಗಿನ ಭೇಟಿ ಸಂದರ್ಭದಲ್ಲಿ ಪ್ರಾದೇಶಿಕ ಸಂಪರ್ಕ ಮತ್ತು ಸಮದ್ಧಿಯನ್ನು ಉತ್ತೇಜಿಸುವ ಐತಿಹಾಸಿಕ ಉಪಕ್ರಮವಾಗಿ ಭಾರತ-ಮಧ್ಯಪ್ರಾಚ್ಯ-ಯುರೋಪ್ ಕಾರಿಡಾರ್ (ಐಎಂಇಇಸಿ) ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದ್ದಾರೆ.
ನಿನ್ನೆ ನಡೆದ ಮಾತುಕತೆಯ ವೇಳೆ, ಪ್ರಧಾನಿ ಮೋದಿ ಅವರು ಯುಎಇ ಅಧ್ಯಕ್ಷ ಶೇಖ್ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಹೇಳಿಕೆ ತಿಳಿಸಿದೆ.
ದ್ವಿಪಕ್ಷೀಯ ಸಂಬಂಧಗಳಲ್ಲಿ ಪೀಳಿಗೆಯ ನಿರಂತರತೆಯನ್ನು ಗುರುತಿಸಿದ ಅಬುಧಾಬಿಯ ಕ್ರೌನ್ ಪ್ರಿನ್‌್ಸ ಶೇಖ್ ಖಲೀದ್ ಬಿನ್ ಮೊಹಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಸೆಪ್ಟೆಂಬರ್ 2024 ರಲ್ಲಿ ಭಾರತಕ್ಕೆ ಭೇಟಿ ನೀಡುವುದು ಸೇರಿದಂತೆ ಆಗಾಗ್ಗೆ ಉನ್ನತ ಮಟ್ಟದ ಭೇಟಿಗಳು ಮತ್ತು ವಿನಿಮಯಗಳ ಬಗ್ಗೆ ಪಿಎಂ ಮೋದಿ ಅವರು ತಪ್ತಿ ವ್ಯಕ್ತಪಡಿಸಿದ್ದಾರೆ.
ಇಬ್ಬರು ನಾಯಕರ ಹೇಳಿಕೆಯ ಪ್ರಕಾರ ತಂತ್ರಜ್ಞಾನ, ಶಕ್ತಿ ಮತ್ತು ಜನರ ನಡುವಿನ ಸಂಬಂಧಗಳನ್ನು ಒಳಗೊಂಡಂತೆ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಒತ್ತು ನೀಡಲು ಸಮತಿಸಲಾಗಿದೆ.
ಯುಎಇ ವಿದೇಶಾಂಗ ಸಚಿವ ಜಾಯೆದ್ ಅಲ್ ನಹ್ಯಾನ್ ಅವರು ಪಶ್ಚಿಮ ಏಷ್ಯಾದಲ್ಲಿ ಚಾಲ್ತಿಯಲ್ಲಿರುವ ಪರಿಸ್ಥಿತಿಯ ಕುರಿತು ಯುಎಇಯ ದಷ್ಟಿಕೋನವನ್ನು ಹಂಚಿಕೊಂಡರು ಮತ್ತು ಈ ಪ್ರದೇಶದಲ್ಲಿ ದೀರ್ಘಾವಧಿಯ ಶಾಂತಿ, ಸ್ಥಿರತೆ ಮತ್ತು ಭದ್ರತೆಯನ್ನು ಬೆಂಬಲಿಸುವ ಭಾರತದ ಬದ್ಧತೆಯನ್ನು ಪ್ರಧಾನಿ ಪುನರುಚ್ಚರಿಸಿದರು.
ಯುಎಇಯಲ್ಲಿರುವ ದೊಡ್ಡ ಮತ್ತು ರೋಮಾಂಚಕ ಭಾರತೀಯ ಸಮುದಾಯದ ಕಲ್ಯಾಣವನ್ನು ಖಾತ್ರಿಪಡಿಸಿದ್ದಕ್ಕಾಗಿ ಪ್ರಧಾನ ಮಂತ್ರಿ ಯುಎಇಯ ನಾಯಕತ್ವಕ್ಕೆ ಧನ್ಯವಾದ ಅರ್ಪಿಸಿದರು ಎಂದು ಇಲಾಖೆ ತಿಳಿಸಿದೆ.