“ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರದಿದ್ದರೆ ನಾವು ವಿಶ್ವಕಪ್ ಬಹಿಷ್ಕರಿಸಬೇಕಾಗುತ್ತದೆ”

Social Share

ಇಸ್ಲಮಾಬಾದ್,ನ.26- ಭಾರತ ನಮ್ಮ ದೇಶಕ್ಕೆ ಬಂದು ಆಡದಿದ್ದರೆ ನಾವು ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಪಂದ್ಯಗಳನ್ನು ಬಹಿಷ್ಕರಿಸಬೇಕಾಗುತ್ತದೆ ಎಂದು ಪಾಕ್ ಕ್ರಿಕೆಟ್ ಮಂಡಳಿ ಎಚ್ಚರಿಕೆ ನೀಡಿದೆ.

ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಏಷ್ಯಾ ಕಪ್ ಪಂದ್ಯದಲ್ಲಿ ಭಾರತ ಭಾಗವಹಿಸದಿದ್ದರೆ, ಭಾರತದಲ್ಲಿ ನಡೆಯಲಿರುವ ವಿಶ್ವಕಪ್ ಗೆ ನಮ್ಮ ತಂಡವನ್ನು ಕಳುಹಿಸುವುದಿಲ್ಲ ಎಂದು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜ್ ರಾಜಾ ಎಚ್ಚರಿಸಿದ್ದಾರೆ.

ವಿಶ್ವಕಪ್ ಪಂದ್ಯಕ್ಕೂ ಮುನ್ನ ಏಷ್ಯಾ ಕಪ್ ಪಂದ್ಯ ನಡೆಯುವುದರಿಂದ ಪಾಕ್ ಇಂತಹ ತೀರ್ಮಾನಕ್ಕೆ ಬಂದಿದೆ. ನಮ್ಮ ತಂಡ ಇತ್ತಿಚೆಗೆ ಅತ್ಯುತ್ತಮ ಪ್ರದರ್ಶನ ತೋರುತ್ತಿದೆ. ಅದರಲ್ಲೂ ಭಾರತ ವಿರುದ್ಧ ನಡೆದ ಎರಡು ಪಂದ್ಯಗಳಲ್ಲಿ ನಮ್ಮ ಆಟಗಾರರು ಉತ್ತಮ ಆಟ ಪ್ರದರ್ಶಿಸಿ ಗೆಲುವು ಸಾಧಿಸಿದ್ದಾರೆ.

ಮಹಾರಾಷ್ಟ್ರದ 42 ಗ್ರಾಮಗಳನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಲು ನಿರ್ಣಯ

ಹೀಗಾಗಿ ಭಾರತ ವಿರುದ್ಧದ ಪಂದ್ಯಗಳನ್ನು ನಾವು ಎದುರು ನೋಡುತ್ತಿದ್ದೇವೆ. ಎರಡು ತಂಡಗಳ ನಡುವಿನ ಪಂದ್ಯಗಳು ಕ್ರಿಕೆಟ್ ಅಭಿಮಾನಿಗಳಿಗೆ ರಸದೌತಣ ನೀಡಲಿರುವುದರಿಂದ ಉಭಯ ರಾಷ್ಟ್ರಗಳ ನಡುವೆ ಆಗಾಗ ಪಂದ್ಯಗಳನ್ನು ಆಯೋಜಿಸುವ ಅವಶ್ಯಕತೆ ಇದೆ ಎಂದು ರಾಜಾ ಹೇಳಿದ್ದಾರೆ.

ಶಾಲೆಗಳಲ್ಲಿ ಮೊಬೈಲ್ ಬಳಕೆ ನಿಷೇಧಕ್ಕೆ ಸರ್ಕಾರ ಸಿದ್ಧತೆ

ಕಳೆದ 2009ರಲ್ಲಿ ಪಾಕ್ ಏಷ್ಯಾ ಕಪ್ ಪಂದ್ಯವನ್ನು ಆಯೋಜಿಸಿತ್ತು. ಆ ಸಂದರ್ಭದಲ್ಲಿ ಗಡಾಫಿ ಕ್ರೀಡಾಂಗಣದ ಹೊರಗೆ ಶ್ರೀಲಂಕಾ ತಂಡದ ಮೇಲೆ ಭಯೋತ್ಪಾದಕ ದಾಳಿ ನಡೆದಿತ್ತು. ಈ ಘಟನೆಯನ್ನು ಖಂಡಿಸಿ ವಿಶ್ವದ ಹಲವಾರು ರಾಷ್ಟ್ರಗಳ ಕ್ರಿಕೆಟ್ ತಂಡಗಳು ಪಾಕ್ ಪ್ರವಾಸ ಕೈಗೊಳ್ಳುವುದನ್ನು ಮೊಟಕುಗೊಳಿಸಿದ್ದವು.

India, Pakistan, Asia Cup, World Cup, Ramiz Raja,

Articles You Might Like

Share This Article