ನವದೆಹಲಿ,ಫೆ.1- ಗ್ರಾಮೀಣ ಆರ್ಥಿಕತೆಗೆ ಒತ್ತು ನೀಡುವ ಉದ್ದೇಶದಿಂದ ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ಹೊಸ ಶಕ್ತಿಯನ್ನಾಗಿ ಪರಿವರ್ತಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ಮೇಲಿನ ಭಾಷಣದಲ್ಲಿ ಅವರು, ಇಂಡಿಯಾ ಪೋಸ್ಟ್ ಸಂಸ್ಥೆಯನ್ನು ದೊಡ್ಡ ಸಾರ್ವಜನಿಕ ಲಾಜಿಸ್ಟಿಕ್ ಸಂಸ್ಥೆಯಾಗಿ ಪರಿವರ್ತಿಸುವ ಯೋಜನೆ ಹಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಭಾಗದಲ್ಲಿರುವ ಒಂದೂವರೆ ಲಕ್ಷ ಅಂಚೆ ಕಚೇರಿಗಳನ್ನು ಇದಕ್ಕಾಗಿ ಬಳಕೆ ಮಾಡಲಾಗುತ್ತದೆ. ಇದರಿಂದ ಗ್ರಾಮೀಣ ಆರ್ಥಿಕತೆಗೆ ಅನುಕೂಲವಾಗಲಿದೆ. ಪೋಸ್ಟ್ ಆಫೀಸ್‌ಗಳನ್ನು ಬಲವರ್ಧನೆಗೊಳಿಸುವುದರ ಜೊತೆಗೆ ಅವುಗಳಿಗೆ ಮರುಜೀವ ನೀಡಿ ಬೃಹತ್ ಉದ್ಯಮವನ್ನಾಗಿ ಪರಿವರ್ತಿಸಲು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ದೀಪಾವಳಿಯಂದು ದೇಶವಾಸಿಗಳಿಗೆ ಪತ್ರ ಬರೆದ ಪ್ರಧಾನಿ ಮೋದಿ
- ಬಿಹಾರ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ RJD ಅಭ್ಯರ್ಥಿ ಅರೆಸ್ಟ್
- ಪೊಲೀಸ್ ಸಿಬ್ಬಂದಿಯ ದೃಢವಾದ ಸಮರ್ಪಣೆಯನ್ನು ಸ್ಮರಿಸಿದ ಪ್ರಧಾನಿ ಮೋದಿ
- ಬಿಹಾರ ಚುನಾವಣೆಗೆ ಕಾಂಗ್ರೆಸ್ ಸರ್ಕಾರ ಹಣ ನೀಡುತ್ತಿದೆ ಬಿಜೆಪಿಯವರು ಸುಳ್ಳುಹೇಳುತ್ತಿದ್ದಾರೆ : ರಾಮಲಿಂಗಾರೆಡ್ಡಿ ಕಿಡಿ
- ಡಿಸಿಎಂ ಡಿಕೆಶಿ ಭೇಟಿ ಮಾಡಿದ ಉದ್ಯಮಿ ಕಿರಣ್ ಮಜುಂದಾರ್ ಷಾ