Tuesday, October 8, 2024
Homeರಾಷ್ಟ್ರೀಯ | National24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು

24 ಗಂಟೆಯಲ್ಲಿ 752 ಹೊಸ ಕೋವಿಡ್ ಪ್ರಕರಣಗಳು, 4 ಸಾವು

ನವದೆಹಲಿ,ಡಿ. 23 (ಪಿಟಿಐ) ದೇಶದಲ್ಲಿ 752 ಕೊರೊನಾ ಸೋಂಕುಗಳ ಒಂದು ದಿನದ ಏರಿಕೆಯನ್ನು ಕಂಡಿದೆ, ಇದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 3,420 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ನಾಲ್ಕು ಹೊಸ ಸಾವುಗಳೊಂದಿಗೆ ಸಾವಿನ ಸಂಖ್ಯೆ 5,33,332 ಕ್ಕೆ ದಾಖಲಾಗಿದೆ – ಕೇರಳದಿಂದ ಇಬ್ಬರು, ರಾಜಸ್ಥಾನ ಮತ್ತು ಕರ್ನಾಟಕದಲ್ಲಿ ತಲಾ ಒಬ್ಬರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದರಿಂದ ದೇಶದ ಕೋವಿಡ್ ಪ್ರಕರಣಗಳ ಸಂಖ್ಯೆ 4.50 ಕೋಟಿ (4,50,07,964)ಗೆ ಏರಿಕೆಯಾಗಿದೆ.

ವಿದ್ಯಾರ್ಥಿಗಳಿಂದ ಶಾಲಾ ಶೌಚಾಲಯ ಸ್ವಚ್ಛಗೊಳಿಸಿದ ಮತ್ತೊಂದು ಪ್ರಕರಣ ಬೆಳಕಿಗೆ

ಆರೋಗ್ಯ ಸಚಿವಾಲಯದ ವೆಬ್‍ಸೈಟ್ ಪ್ರಕಾರ, ರೋಗದಿಂದ ಚೇತರಿಸಿಕೊಂಡ ಜನರ ಸಂಖ್ಯೆ 4,44,71,212 ಕ್ಕೆ ಏರಿದೆ ಮತ್ತು ರಾಷ್ಟ್ರೀಯ ಚೇತರಿಕೆ ಪ್ರಮಾಣವು 98.81 ಪ್ರತಿಶತದಷ್ಟಿದೆ. ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ದೇಶದಲ್ಲಿ ಇದುವರೆಗೆ 220.67 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ ಎಂದು ಸಚಿವಾಲಯದ ವೆಬ್‍ಸೈಟ್ ತಿಳಿಸಿದೆ.

RELATED ARTICLES

Latest News