ದೇಶದಾದ್ಯಂತ 24 ಗಂಟೆಯಲ್ಲಿ 2,828 ಮಂದಿಗೆ ಕೊರೋನಾ,14 ಸಾವು

Spread the love

ನವದೆಹಲಿ,ಮೇ.29- ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,828 ಜನರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ. ಸೋಂಕು ಏರಿಕೆ ಜೊತೆಗೆ ಸಾವಿನ ಸಂಖ್ಯೆ ದಿಢೀರ್ ಏರಿಕೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಕಳೆದ 24 ಗಂಟೆಯಲ್ಲಿ ಕೊರೊನಾ ಮಹಾಮಾರಿಗೆ 14 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್‍ನಿಂದ ಸಾವನ್ನಪ್ಪಿದವರ ಸಂಖ್ಯೆ 524586 ಕ್ಕೆ ಏರಿಕೆಯಾದಂತಾಗಿದೆ. ದೇಶದಲ್ಲಿ 17087 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2035 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 42611370 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 13,81,764 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,93,28,44,077 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 4,74,309 ಜನರನ್ನು ಕೋವಿಡ್ ಟೆಸ್ಟ ಗೆ ಒಳಪಡಿಸಲಾಗಿದೆ.

Facebook Comments