ನವದೆಹಲಿ,ಫೆ.8-ದಿನೇ ದಿನೇ ಕೊರೊನಾ ಸೋಂಕಿನ ಪ್ರಮಾಣ ದೇಶದಲ್ಲಿ ಇಳಿಕೆಯಾಗುತ್ತಿದ್ದು, 87 ಸಾವಿರದಷ್ಟಿದ್ದ ಕೊರೊನಾ ಸೋಂಕಿನ ಪ್ರಮಾಣ ಕಳೆದ 24 ಗಂಟೆಯಲ್ಲಿ 67 ಸಾವಿರಕ್ಕೆ ತಗ್ಗಿದೆ. ಸೋಂಕಿನಿಂದ 1,188 ಮಂದಿ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಸದ್ಯ ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 9,94,891ರಷ್ಟಿದ್ದು, ಒಟ್ಟು ಸೋಂಕಿತರಲ್ಲಿ ಶೇ.2.35ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಳೆದ 24 ಗಂಟೆಯಲ್ಲಿ 1,80,456 ಮಂದಿ ಕೋವಿಡ್‍ನಿಂದ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4.08,40,065 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಗುಣಮುಖರಾಗಿರುವವರ ಪ್ರಮಾಣ ಶೇ.96.46ರಷ್ಟಿದೆ. 1088 ಮಂದಿ ಸಾವನ್ನಪ್ಪಿರುವುದು ಸೇರಿದಂತೆ ದೇಶದಲ್ಲಿ ಇದುವರೆಗೆ 5,04,062 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈವರೆಗೆ ದೇಶಾದ್ಯಂತ 1,70,21,615 ಕೋಟಿ ಡೋಸ್ ವಾಕ್ಸಿನೇಷನ್ ನೀಡಲಾಗಿದೆ. ನಿನ್ನೆ ಒಂದೇ ದಿನ 55,78,297 ಮಂದಿಗೆ ಲಸಿಕೆ ನೀಡಲಾಗಿದೆ.
