ನವದೆಹಲಿ,ಫೆ.7- ಭೂಕಂಪ ಪೀಡಿತ ಟರ್ಕಿಗೆ ಭಾರತ ಸಹಾಯಹಸ್ತ ಚಾಚಿದೆ. ಟರ್ಕಿಗೆ ಅಗತ್ಯವಿರುವ ನೆರವು ನೀಡಲು ಭಾರತ ಸಿದ್ದ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಕೆಲವೆ ಗಂಟೆಗಳಲ್ಲೇ ವಾಯುಪಡೆ ವಿಮಾನಗಳು ಭೂಕಂಪ ಪರಿಹಾರ ಸಾಮಗ್ರಿಗಳ ಮೊದಲ ಬ್ಯಾಚ್‍ನ್ನು ಟರ್ಕಿಗೆ ಕೊಂಡೊಯ್ದವು
ಪುರುಷ ಮತ್ತು ಮಹಿಳಾ ಸಿಬ್ಬಂದಿ, ಹೆಚ್ಚು ನುರಿತ ಶ್ವಾನದಳಗಳು, ವೈದ್ಯಕೀಯ ಸಾಮಗ್ರಿಗಳ ಒಂದು ಶ್ರೇಣಿ, ಸುಧಾರಿತ ಡ್ರಿಲ್ಲಿಂಗ್ ಉಪಕರಣಗಳು ಮತ್ತು ಸಹಾಯದ ಪ್ರಯತ್ನಗಳಿಗೆ ಅಗತ್ಯವಿರುವ ಇತರ ನಿರ್ಣಾಯಕ ಸಾಧನಗಳನ್ನು ಒಳಗೊಂಡಂತೆ ಪರಿಣಿತ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಶೋಧ ಮತ್ತು ಪಾರುಗಾಣಿಕಾ ತಂಡಗಳು ಟರ್ಕಿಗೆ ಪ್ರಯಾಣ ಬೆಳೆಸಿವೆ.

ವಿಶೇಷವಾಗಿ ತರಬೇತಿ ಪಡೆದ ಶ್ವಾನದಳಗಳು, ವೈದ್ಯಕೀಯ ಸರಬರಾಜುಗಳು, ಕೊರೆಯುವ ಯಂತ್ರಗಳು ಮತ್ತು ಇತರ ಅಗತ್ಯ ಉಪಕರಣಗಳೊಂದಿಗೆ ಭೂಕಂಪ ಪರಿಹಾರ ಸಾಮಗ್ರಿಗಳ 1 ನೇ ಬ್ಯಾಚ್ ಟರ್ಕಿಗೆ ಹೊರಟಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಬಾಗ್ಚಿ ಟ್ವೀಟ್ ಮಾಡಿದ್ದಾರೆ.
ಪೆರುವಿನಲ್ಲಿ ಭೂ ಕುಸಿತು, 36 ಮಂದಿ ಸಾವು
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ಹೃತ್ಪೂರ್ವಕ ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ. ಕನಿಷ್ಠ 5000 ಜನರ ಸಾವಿಗೆ ಕಾರಣವಾದ ಭೂಕಂಪದ ನಂತರದ ಪರಿಣಾಮಗಳನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಾಗಲ್ಯಾಂಡ್ ವಿಧಾನಸಭಾ ಚುನಾವಣೆ : ಕೇವಲ 6 ನಾಮಪತ್ರ ಸಲ್ಲಿಕೆ..!
ಟರ್ಕಿಯಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿಪಾಸ್ತಿ ಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಧಾನಿ ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
India, sends, earthquake, relief, material, Turkey,