ಭಾರತ ಅಮೆರಿಕ ನಡುವಿನ ರಕ್ಷಣೆ ಮತ್ತು ಭದ್ರತೆ ಬಾಂಧವ್ಯ ಮತ್ತಷ್ಟು ಗಟ್ಟಿ

Spread the love

ವಾಷಿಂಗ್ಟನ್, ನ.12- ರಕ್ಷಣೆ ಮತ್ತು ಭದ್ರತೆ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ಬಾಂಧವ್ಯವನ್ನು ಜೋ ಬಿಡೆನ್ ಆಡಳಿತ ಮುಂದುವರೆಸಲು ಉತ್ಸುಕವಾಗಿದೆ ಎಂದು ಬರಾಕ್ ಒಬಾಮಾ ಕಾಲದ ಉನ್ನತಾಧಿಕಾರಿ ಅಲೀಸಾ ಐರೀಸ್ ಸ್ಪಷ್ಟಪಡಿಸಿದ್ದಾರೆ. ಟ್ರಂಪ್ ಆಡಳಿತದ ಅವಧಿಯಲ್ಲಿ ಭಾರತ ಮತ್ತು ಅಮೆರಿಕಗಳ ನಡುವೆ ಭದ್ರತೆ ಮತ್ತು ರಕ್ಷಣೆ ವಿಚಾರದಲ್ಲಿ ಹಲವಾರು ಒಪ್ಪಂದಗಳಿಗೆ ಸಹಿ ಮಾಡಲಾಗಿತ್ತು.

ಇದೀಗ ಅಮೆರಿಕದ ನೂತನ ಅಧ್ಯಕ್ಷರಾಗಿ ನಿಯೋಜನೆಗೊಳ್ಳಲಿರುವ ಜೋ ಬಿಡೆನ್ ಅವರು ಭಾರತ ಸ್ನೇಹಿ ಅಧ್ಯಕ್ಷರಾಗಿದ್ದು , ಹಿಂದಿನ ಸರ್ಕಾರದಲ್ಲಿ ಭಾರತದೊಂದಿಗೆ ಮಾಡಿಕೊಂಡಿದ್ದ ಒಡಂಬಡಿಕೆಗಳನ್ನು ಮುಂದುವರೆಸಲು ತೀರ್ಮಾನಿಸಿದ್ದಾರೆ ಎಂದು ಉನ್ನತಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಜೋಬಿಡೆನ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಶ್ವೇತಭವನ ಪ್ರವೇಶಕ್ಕೆ ಟ್ರಂಪ್ ಅಡ್ಡಿಪಡಿಸಿರುವ ಹಿನ್ನೆಲೆಯಲ್ಲಿ ಬಿಡೆನ್ ಅವರು ಕಾನೂನು ಹೋರಾಟಕ್ಕೆ ಮುಂದಾಗಿದ್ದಾರೆ. ಇಂತಹ ಸಂದರ್ಭಗಳಲ್ಲೂ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಅವರು ನಿರ್ಧರಿಸಿದ್ದಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಜೋ ಬಿಡೆನ್ ಅವರು ಒಬಾಮಾ ಕಾಲದಲ್ಲಿ ಉಪಾಧ್ಯಕ್ಷರಾಗಿದ್ದ ಸಂದರ್ಭದಲ್ಲೂ ಭಾರತದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ನಾಗರಿಕ ಅಣ್ವಸ್ತ್ರ ಒಪ್ಪಂದಕ್ಕೆ ಭಾರತ ಸಹಿ ಹಾಕುವಲ್ಲಿಯೂ ಬಿಡೆನ್ ಅವರ ಪಾತ್ರ ಮಹತ್ವದ್ದಾಗಿತ್ತು ಎಂದು ಅಲೀಸಾ ಐರೀಸ್ ಹೇಳಿದ್ದಾರೆ.

Facebook Comments