ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವಿಶ್ವದಲ್ಲೇ ಮೊದಲ ಸ್ಥಾನಕ್ಕೆ ಹೋಗಬೇಕು : ಷಾ

Social Share

ಹುಬ್ಬಳ್ಳಿ,ಜ.28- ಮಾಹಿತಿ ಮತ್ತು ತಂತ್ರಜ್ಞಾನದಲ್ಲಿ ಭಾರತ ವಿಶ್ವದಲ್ಲೇ ಮೊದಲ ಸ್ಥಾನಕ್ಕೆ ಹೋಗಬೇಕು. ಇದಕ್ಕಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಶಪಥ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಕರೆ ನೀಡಿದರು.

ಇಲ್ಲಿನ ಬಿವಿಬಿ ವಿಶ್ವವಿದ್ಯಾಲಯದ ಅಮೃತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿಯೊಂದು ಕ್ಷೇತ್ರದಲ್ಲಿ ಭಾರತ ವಿಶ್ವಗುರುವಾಗಿ ಹೊರಹೊಮ್ಮುತ್ತಿದೆ. ಐಟಿಬಿಟಿ ಸೇರಿದಂತೆ ಪ್ರತಿಯೊಂದು ಕ್ಷೇತ್ರವು ನಮ್ಮದಾಗಬೇಕು. ಇದಕ್ಕಾಗಿ ವಿದ್ಯಾರ್ತಿಗಳು ಹೆಚ್ಚು ಶ್ರಮ ಪಡಬೇಕೆಂದು ಸಲಹೆ ಮಾಡಿದರು.

ಭಾರತ ಹಿಂದಿನಂತಿಲ್ಲ. ನಾವು ಒಂದು ಕಾಲದಲ್ಲಿ ಪ್ರತಿಯೊಂದಕ್ಕೂ ವಿದೇಶದತ್ತ ನೋಡುತ್ತಿದ್ದೆವು. ಇಂದು ಅದೇ ವಿದೇಶಗಳು ನಮ್ಮ ದೇಶದತ್ತ ನೋಡುವಂತಾಗಿದೆ. ಇದು ಭಾರತ ಬೆಳೆದಿರುವ ಪರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಭಾರತದಲ್ಲಿ ವಿವಾದ ಸೃಷ್ಟಿಸಿದ ಬಿಬಿಸಿ ಸಾಕ್ಷ್ಯ ಚಿತ್ರಗಳ ಸರಣಿ

ಐಐಎಟಿ, ಐಐಎಎಂ, ಏಮ್ಸ್ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ನಾವು ಯಾವುದೇ ದೇಶಕ್ಕೆ ಕಡಿಮೆ ಇಲ್ಲದಂತೆ ಬೆಳೆದಿದ್ದೇವೆ. ಇದನ್ನು ಬೆಳೆಸಿಕೊಂಡು ಹೋಗುವುದು ವಿದ್ಯಾರ್ಥಿಗಳ ಮೇಲಿದೆ ಎಂದು ಕರೆ ನೀಡಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿ ಅವರು ಅಕಾರಕ್ಕೆ ಬಂದ ನಂತರ ಎಲ್ಲ ಕ್ಷೇತ್ರಗಳಲ್ಲೂ ಗಣನೀಯ ಬದಲಾವಣೆಯಾಗಿದೆ. ಆರೋಗ್ಯ, ಕೃಷಿ, ಕೈಗಾರಿಕೆ, ವೈದ್ಯಕೀಯ, ಇಂಜಿನಿಯರಿಂಗ್ ಹೀಗೆ ಹತ್ತು ಹಲವು ಕ್ಷೇತ್ರಗಳಲ್ಲಿ ಗಣನೀಯ ಅಭಿವೃದ್ಧಿಯಾಗಿದೆ. ಇದಕ್ಕೆ ಕಾರಣ ನಮ್ಮ ದೂರದೃಷ್ಟಿ ಕಾರಣ ಎಂದು ಅಭಿಪ್ರಾಯಪಟ್ಟರು.
ಒಂದು ಕಾಲದಲ್ಲಿ ಭಾರತವನ್ನು ವಿದೇಶಿಗರು ಕೇವಲವಾಗಿ ನೋಡುತ್ತಿದ್ದರು.

ಕಿತ್ತೂರು ಕರ್ನಾಟಕ ಬಿಜೆಪಿಯ ಭದ್ರಕೋಟೆ : ಸಿಎಂ ಬೊಮ್ಮಾಯಿ

ಇಂದು ಅದೇ ವಿದೇಶಿಗರು ಭಾರತ ಎಂದರೆ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿರುವ ಸೂಪರ್ ಪವರ್ ರಾಷ್ಟ್ರ ಎಂದು ಭಾವಿಸುತ್ತಾರೆ. ಅದು ವೈಮಾನಿಕ, ರಕ್ಷಣೆ, ಬಾಹ್ಯಾಕಾಶ ಹೀಗೆ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಹೊಂದಿದ್ದೇವೆ. ಸರ್ಕಾರ ನಡೆಸುವವರ ಚಿಂತನೆಗಳು ಸಕಾರಾತ್ಮಕವಾಗಿದ್ದರೆ ದೇಶವು ಕೂಡ ಸರಿಯಾದ ಮಾರ್ಗದಲ್ಲಿ ನಡೆಯುತ್ತದೆ ಎಂದು ಹೇಳಿದರು.

ಬಿವಿಬಿ ಕಾಲೇಜನ್ನು ಐವರು ದೂರದೃಷ್ಟಿ ಇಟ್ಟುಕೊಂಡು ರಚನೆ ಮಾಡಿದರು. ಇಂದು ಕರ್ನಾಟಕದಲ್ಲೇ ಅತ್ಯಂತ ಪ್ರಮುಖ ಶಿಕ್ಷಣ ಕೇಂದ್ರವಾಗಿ ಹೊರಹೊಮ್ಮಿದೆ. ಇಲ್ಲಿ ಕಲಿತ ಸಾವಿರಾರು ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲೂ ಹೆಸರು ಸಂಪಾದಿಸಿದ್ದಾರೆ.

ಇದೇ ರೀತಿ ನೀವು ಕೂಡ ಮುಂದೆ ಬರಬೇಕೆಂದರು. ಪ್ರಧಾನಿ ನರೇಂದ್ರಮೋದಿ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ಕೊಟ್ಟಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವರಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

India, world, information, technology, Amit Shah,

Articles You Might Like

Share This Article