ಪ್ರಯಾಗ್‌ರಾಜ್, ಮಾ.29-ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಕಂಟೋನ್ಸೆಂಟ್ ಪ್ರದೇಶದಲ್ಲಿರುವ ಭಾರತೀಯ ವಾಯುಪಡೆಯ ಸಿವಿಲ್ ಎಂಜಿನಿಯರ್ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.
ಎಸ್‌ಎನ್ ಮಿಶ್ರಾ (51) ಕೊಲೆಯಾದ ಅಧಿಕಾರಿ. ತಮ್ಮ ಮನೆಯ ಕೋಣೆಯಲ್ಲಿ ಮಲಗಿದ್ದಾಗ ಅಪರಿಚಿತ ದುಷ್ಕರ್ಮಿಯೊಬ್ಬ ಕಿಟಕಿಯಿಂದ ಮೂಲಕ ರಿವಾಲ್ವರ್‌ನಿಂದ ಗುಂಡು ಹಾರಿಸಿದ್ದಾನೆ ಎಂದು ಪುರಾಮುಷ್ಟಿ ಪೊಲೀಸ್ ಠಾಣೆ ಅಧಿಕಾರಿ ಮನೋಜ್ ಸಿಂಗ್ ತಿಳಿಸಿದ್ದಾರೆ.
ಎದೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡ ಮಿಶ್ರಾ ಅವರನ್ನು ತಕ್ಷಣ ಸೇನಾ ಆಸ್ಪತ್ರೆಗೆ ಸಾಗಿಸಲಾಯಿತು. ಮಿಶ್ರಾ ಆಸ್ಪತ್ರೆಯಲ್ಲಿ ಮಿಶ್ರಾ ಅವರು ಪತ್ನಿ, ಒಬ್ಬ ಮಗ ಮತ್ತು ಮಗಳು ಜೊತೆ ವಾಸಿಸುತ್ತಿದ್ದರು ಈ ಘಟನೆ ಹಿಂದ ಉಗ್ರರ ಕೈವಾಡ ವಿರುವ ಶಂಕೆ ಇದೆ,ಹಿರಿಯ ಮೃತಪಟ್ಟಿದ್ದಾರೆ ಪೊಲೀಸ್ ಅಧಿಕಾರಿಗಳು, ಸೇನಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.