ನವದೆಹಲಿ,ಮೇ 9-ಭಾರತ ಹಾಗೂ ಪಾಕಿಸ್ತಾನ ನಡುವೆ ಸಂಪೂರ್ಣ ಯುದ್ಧದ ವಾತಾವರಣ ಏರ್ಪಟ್ಟಿದೆ. ಗಡಿಯಾಚೆಗಿನ ಗುಂಡಿನ ದಾಳಿಗೆ ಭಾರತೀಯ ಪಡೆಗಳು ಪ್ರತಿದಾಳಿ ನಡೆಸುತ್ತಿವೆ. ನಿಯಂತ್ರಣ ರೇಖೆಯ ಉದ್ದಕ್ಕೂ ಹಲವಾರು ಪಾಕಿಸ್ತಾನಿ ಸೇನಾ ನೆಲೆಗಳು ನಾಶವಾಗಿವೆ. ಯಾವ ಸಮಯದಲ್ಲಾದರೂ ಯುದ್ಧ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇದರ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ,ಕೇಂದ್ರ ಸಚಿವರಾದ ಗೃಹ ಸಚಿವ ಅಮಿತ್ ಷಾ, ರಾಜ್ ನಾಥ್ ಸಿಂಗ್, ನಿರ್ಮಾಲಾ ಸೀತರಾಮನ್, ಜೈ ಶಂಕರ್ ಅವರುಗಳು ಪ್ರತ್ಯೇಕವಾಗಿ ಸಭೆ ನಡೆಸಿರುವುದು ಯುದ್ದದ ಮುನ್ಸೂಚನೆ ಎಂದೇ ಹೇಳಲಾಗಿದೆ.
ಮೋದಿ ಅವರು ಪಾಕಿಸ್ತಾನದ ಜೊತೆ ಗಡಿ ಹಂಚಿಕೊಂಡಿರುವ ಗುಜರಾತ್, ಪಂಜಾಬ್, ರಾಜಸ್ತಾನ ಹಾಗೂ ಜಮು ಮತ್ತು ಕಾಶೀರದ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಪರಿಸ್ಥಿತಿರುನ್ನು ಆವಲೋಕನ ಮಾಡಿದರು.ಇನ್ನೊಂದೆಡೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಎಲ್ಲಾ ಪ್ರಮುಖ ಸಂಸ್ಥೆಗಳಲ್ಲಿ ಭದ್ರತೆಯನ್ನು ಹೆಚ್ಚಿಸುವಂತೆ ಸಿಐಎಸ್‌ಎಫ್(ಕೇಂದ್ರ ಕೈಗಾರಿಕಾ ಭದ್ರತಾ ಪಡೆ)ಗೆ ನಿರ್ದೇಶನ ನೀಡಿದ್ದಾರೆ.
ಭಾರತದಾದ್ಯಂತ ವಿಮಾನ ನಿಲ್ದಾಣಗಳು, ವಿದ್ಯುತ್ ಸ್ಥಾವರಗಳು, ಪರಮಾಣು ಸ್ಥಾಪನೆಗಳು, ಬಾಹ್ಯಾಕಾಶ ಸಂಶೋಧನಾ ಸೌಲಭ್ಯಗಳು ಮತ್ತು ಪ್ರಮುಖ ಸರ್ಕಾರಿ ಕಟ್ಟಡಗಳು ಸೇರಿದಂತೆ ನಿರ್ಣಾಯಕ ಮೂಲಸೌಕರ್ಯಗಳನ್ನು ರಕ್ಷಿಸುವ ಕಾರ್ಯವನ್ನು ಸಿಐಎಸ್‌ಎಫ್ ಹೊಂದಿದೆ. ಗಡಿ ಪರಿಸ್ಥಿತಿ ಮತ್ತು ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಶಾ ಅವರು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮಹಾನಿರ್ದೇಶಕರು, ಸಿಐಎಸ್‌ಎಫ್ ಮಹಾನಿರ್ದೇಶಕರು ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಪಾಕಿಸ್ತಾನ ಶಸಾ್ತ್ರಸ್ತ್ರ ಪಡೆಗಳು ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಮಿಲಿಟರಿ, ವಿಮಾನ ನಿಲ್ದಾಣಗಳು ಮತ್ತು ಇತರ ಸ್ಥಳಗಳನ್ನು ಗುರಿಯಾಗಿಸಿ ದಾಳಿಗೆ ಮುಂದಾಗಿದ್ದು, ಆದರೆ ಭಾರತವು ಈ ದಾಳಿಯನ್ನು ತಡೆದಿದೆ. ಈ ನಿಟ್ಟಿನಲ್ಲಿ ಈ ನಿರ್ದೇಶನಗಳನ್ನು ನೀಡಲಾಗಿದೆ.
ಪಾಕಿಸ್ತಾನದ ವಿರುದ್ಧ ನಡೆಯುತ್ತಿರುವ ಸೇನಾ ಕಾರ್ಯಾಚರಣೆಯ ಬಗ್ಗೆ ಸಿಡಿಎಸ್ ಮತ್ತು ಮೂರು ಸೇನಾ ಮುಖ್ಯಸ್ಥರ ಜೊತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೈವೋಲ್ಟೇಜ್ ಸಭೆ ನಡೆಸಿದ್ದಾರೆ.ದೆಹಲಿಯಲ್ಲಿ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಮತ್ತು ಮೂರು ಸೇನಾ ಮುಖ್ಯಸ್ಥರೊಂದಿಗೆ 2 ಗಂಟೆಗಳ ಕಾಲ ಈ ಸಭೆ ನಡೆದಿದೆ. ಈ ವೇಳೆ ಪಾಕ್ ಕ್ಷಿಪಣಿ ಮತ್ತು ಡ್ರೋನ್ ದಾಳಿಯನ್ನು ಭಾರತ ಯಶಸ್ವಿಯಾಗಿ ತಡೆದ ಬಗ್ಗೆ ಅವರು ಮಾಹಿತಿ ಪಡೆದರು. ಆಪರೇಷನ್ ಸಿಂಧೂರ್‌ಬಳಿಕ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯ ಬಗ್ಗೆ ನಿರ್ಣಯಿಸಲು ಈ ಸಭೆ ನಡೆಸಲಾಗಿದೆ.
ಮೂಲಗಳ ಪ್ರಕಾರ ಮೇ 8ರ ರಾತ್ರಿ 11 ಗಂಟೆ ಸುಮಾರಿಗೆ ಜಮು-ಕಾಶೀರದ ಸಾಂಬಾ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪ್ರಮುಖ ಒಳನುಸುಳುವಿಕೆ ಯತ್ನವನ್ನು ಬಿಎಸ್‌ಎಫ್ ವಿಫಲಗೊಳಿಸಿದೆ ಎಂದು ಗಡಿ ಭದ್ರತಾ ಪಡೆ ಮಾಹಿತಿ ನೀಡಿದೆ. ಈ ಕಾರ್ಯಾಚರಣೆಯಲ್ಲಿ ಕನಿಷ್ಠ 7 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಈ ಉಗ್ರರಿಗೆ ಪಾಕಿಸ್ತಾನ ಸೇನೆಯ ರೇಂಜರ್ಸ್ ಗಡಿ ನುಸುಳಲು ನೆರವು ನೀಡಿದ್ದರು ಎನ್ನಲಾಗಿದೆ.
ವಿಚಾರ ತಿಳಿದ ಕೂಡಲೇ ಬಿಎಸ್‌ಎಫ್ ಯೋಧರು ಕಾರ್ಯಾಚರಣೆಗಿಳಿದಿದ್ದು, ಉಗ್ರರು ಮತ್ತು ಪಾಕ್ ರೇಂಜರ್ಸ್ ರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.ಈ ವೇಳೆ ಪಾಕ್ ರೇಂಜರ್ಸ್ ಕೂಡ ಪ್ರತಿದಾಳಿ ನಡೆಸಿದ್ದಾರೆ. ಆದರೆ ಸೈನಿಕರ ಗುಂಡೇಟಿಗೆ ಉಗ್ರರು ಸಾವನ್ನಪ್ಪಿದ್ದು, ಅವರಿಗೆ ನೆರವು ನೀಡಿದ ಪಾಕ್ ರೇಂಜರ್ಸ್ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.
ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ಎಲ್ಲಾ ನಗರ ಸರ್ಕಾರಿ ನೌಕರರ ರಜೆಗಳನ್ನು ರದ್ದುಪಡಿಸಲಾಗಿದೆ, ಜಮು ಸೇರಿದಂತೆ ಹಲವಾರು ಗಡಿ ಪ್ರದೇಶಗಳು ಗಡಿಯಾಚೆಗಿನ ಶೆಲ್ ದಾಳಿಗೆ ಒಳಗಾಗಿವೆ. ಇಂಡಿಯಾ ಗೇಟ್‌ನಲ್ಲಿ ಓಡಾಡುವವರನ್ನು ಅಲ್ಲಿಂದ ತೆರಳುವಂತೆ ಸೂಚಿಸಲಾಗಿದೆ. ಜನರು ಆ ಪ್ರದೇಶದಿಂದ ಹೊರಹೋಗುವಂತೆ ಪೊಲೀಸರು ಘೋಷಣೆಗಳನ್ನು ಮಾಡಿದ್ದಾರೆ.
ಗಡಿ ಪ್ರದೇಶಗಳ ಸಮೀಪವಿರುವ ಅನೇಕ ನಗರಗಳಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ಗಡಿಭಾಗದ ನಾಲ್ಕು ರಾಜ್ಯಗಳಲ್ಲಿ ರಾತ್ರಿಯಿಡೀ ಶೆಲ್ಲಿಂಗ್ ನಡೆಯುತ್ತಿದ್ದ ಕಾರಣ ಅಲ್ಲಿ ಬ್ಲ್ಯಾಕ್ ಔಟ್ ಮಾಡಲಾಗಿತ್ತು ಮತ್ತು ಬೆಳಗ್ಗೆ ವಿದ್ಯುತ್ ಪೂರೈಕೆಯನ್ನು ಪುನಸ್ರ್ಥಾಪಿಸಲಾಗಿದೆ. ಈ ರಾಜ್ಯಗಳಲ್ಲಿರುವ ಸೇನಾ ನೆಲೆಗಳು ಮತ್ತು ನಾಗರಿಕರಿಗೆ ಯಾವುದೇ ತೊಂದರೆಯಾಗಿಲ್ಲ. ಜಮು ಮತ್ತು ಕಾಶೀರದ ಗಡಿ ಭಾಗದಲ್ಲಿ ಪಾಕಿಸ್ತಾನದ ಸೇನೆ ಅಪ್ರಚೋದಿತ ಗುಂಡಿನ ದಾಳಿಯನ್ನು ಮುಂದುವರಿಸಿದೆ ಮತ್ತು ಭಾರತೀಯ ಸೇನೆ ತಕ್ಕ ಉತ್ತರವನ್ನು ನೀಡಿದೆ.
ಭಾರತದ ಕ್ಷಿಪಣಿ ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಪಾಕಿಸ್ತಾನವು ಡ್ರೋನ್ ಮತ್ತು ಕ್ಷಿಪಣಿಗಳ ಮೂಲಕ ಜಮುವನ್ನು ಗುರಿಯಾಗಿಸಲು ಪ್ರಯತ್ನಿಸಿತ್ತು. ಪಾಕಿಸ್ತಾನದ ವಾಯುಪಡೆಯ ಪ್ರಮುಖ ನೆಲೆಯಾದ ಸರ್ಗೋಧಾ ವಾಯುನೆಲೆಯಿಂದ ಉಡಾವಣೆಗೊಂಡ ಕೆಲವೇ ಕ್ಷಣಗಳಲ್ಲಿ, ಈ-16 ಯುದ್ಧ ವಿಮಾನವು ಭಾರತದ ನೆಲದಿಂದ ಆಕಾಶಕ್ಕೆ ಚಿಮುವ ಎಸ್‌ಎಎಮ್ ಕ್ಷಿಪಣಿಗೆ ಬಲಿಯಾಗಿದೆ. 1971 ರ ನಂತರ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಘರ್ಷವು ದೊಡ್ಡ ಪ್ರದೇಶದಲ್ಲಿ ಹೆಚ್ಚಾಗಿದೆ. ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತ ಮಾಡಲಾಗಿದೆ. 1965 ಮತ್ತು 1971ರ ಯುದ್ಧಗಳಲ್ಲಿ ಪಾಕಿಸ್ತಾನವು ಸರ್ಗೋಧಾ ವಾಯುನೆಲೆಯನ್ನು ಭಾರತದ ವಿರುದ್ಧ ದಾಳಿಗೆ ಬಳಸಿತ್ತು.
1965 ರಲ್ಲಿ, ಅಮೆರಿಕದ ಈ-104 ಸೂಪರ್ಸಾನಿಕ್ ಸ್ಟಾರ್ಫೈಟರ್ ಜೆಟ್ಗಳ ತವರೂರಾಗಿದ್ದ ಈ ವಾಯುನೆಲೆಯ ಮೇಲೆ, ಆದಂಪುರದಲ್ಲಿ ನೆಲೆಗೊಂಡಿದ್ದ ಭಾರತದ ನಂ. 1 ಸ್ಕ್ವಾಡ್ರನ್ನ ಮಿಸ್ಟೇರ್ ವಿಮಾನವು ದಾಳಿ ಮಾಡಿತ್ತು. ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂದೂರ್ ನಡೆಸಿ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಸದೆಬಡಿದಿತ್ತು.
ಪರಿಣಾಮಕಾರಿಯಾಗಿ ಹಿಮೆಟ್ಟಿಸಿರುವುದಾಗಿ ಭಾರತೀಯ ಸೇನೆ
ಪಾಕಿಸ್ತಾನ ಸಶಸ್ತ್ರ ಪಡೆಗಳು ಮೇ 8 ಮತ್ತು 9ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ನಡೆಸಿದ ದಾಳಿಯನ್ನು ಪರಿಣಾಮಕಾರಿಯಾಗಿ ಹಿಮೆಟ್ಟಿಸಿರುವುದಾಗಿ ಭಾರತೀಯ ಸೇನೆ ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಇಂಡಿಯನ್ ಆರ್ಮಿ ತನ್ನ ಅಧಿಕೃತ ಎ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ಪಾಕಿಸ್ತಾನ ಶಸಾ್ತ್ರಸ್ತ್ರ ಪಡೆಗಳು ಇದೇ ಮೇ 8 ಮತ್ತು 9ರ ಮಧ್ಯರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧ ಸಾಮಗ್ರಿಗಳನ್ನು ಬಳಸಿಕೊಂಡು ಅನೇಕ ದಾಳಿಗಳನ್ನು ನಡೆಸಿದವು.
ಜಮು ಮತ್ತು ಕಾಶೀರದ ನಿಯಂತ್ರಣ ರೇಖೆಯ ಉದ್ದಕ್ಕೂ ಪಾಕ್ ಪಡೆಗಳು ಹಲವಾರು ಕದನ ವಿರಾಮ ಉಲ್ಲಂಘನೆ ಮಾಡಿವೆ. ಆದ್ರೆ ಪಾಕ್‌ನ ಡ್ರೋನ್ ದಾಳಿಗಳನ್ನು ಪರಿಣಾಮಕಾರಿಯಾಗಿ ಹಿಮೆಟ್ಟಿಸಿ, ಸಿಎಫ್‌ವಿಗಳಿಗೆ ತಕ್ಕ ಉತ್ತರ ನೀಡಲಾಗಿದೆ ಎಂದು ಸೇನೆ ಹೇಳಿದೆ. ಅಲ್ಲದೇ ಭಾರತೀಯ ಸೇನೆಯು ರಾಷ್ಟ್ರದ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಬದ್ಧವಾಗಿದೆ. ಎಲ್ಲಾ ದುಷ್ಟ ವಿನ್ಯಾಸಗಳಿಗೆ ಬಲದಿಂದ ಪ್ರತಿಕ್ರಿಯಿಸಲಾಗುವುದು ಎಂದು ಹೇಳಿದೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಒಂದು ದಿನದ ನಂತರ ನಿನ್ನೆ ರಾತ್ರಿ (ಮೇ 8) ಮತ್ತು ಇಂದು ಬೆಳಿಗ್ಗೆ (ಮೇ 9) ಪಾಕಿಸ್ತಾನವು ಭಾರತದ ಮೇಲೆ ಮತ್ತೆ ದಾಳಿ ಮಾಡಲು ಪ್ರಯತ್ನಿಸಿದೆ.
ಜಮು ಮತ್ತು ಕಾಶೀರ, ಪಂಜಾಬ್ ಮತ್ತು ಗುಜರಾತ್ ಸೇರಿದಂತೆ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿರುವ 15 ನಗರಗಳಲ್ಲಿನ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಉದ್ವಿಗ್ನತೆ ಹೆಚ್ಚಿಸಲು ಪಾಕ್ ಪ್ರಯತ್ನಿಸಿತು. ಆದರೆ, ಆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಇದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದೆ.
ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ
ಕಳೆದ ರಾತ್ರಿ ಪಾಕಿಸ್ತಾನ ಭಾರತದ ಜಮು ಮತ್ತು ಕಾಶೀರ, ರಾಜಸ್ಥಾನ ಹಾಗೂ ಪಂಜಾಬ್ ಸೇರಿದಂತೆ ಮೂರು ಗಡಿ ರಾಜ್ಯಗಳನ್ನು ಗುರಿಯಾಗಿಸಿಕೊಂಡು ಏಕಾಏಕಿ ದ್ರೊಣ್ ದಾಳಿ ನಡೆಸಿದ ವೇಳೆ ರಾಜಸ್ಥಾನದ ಹಲವು ಭಾಗಗಳಲ್ಲಿ ಪಾಕ್ ನ ಡ್ರೋನ್‌ಗಳನ್ನು ಭಾರತೀಯ ವಾಯು ಸೇನೆ ಹೊಡೆದುಹಾಕಿದೆ. ಒಂದು ಅಂದಾಜಿನ ಪ್ರಕಾರ ಭಾರತೀಯ ಸೇನೆ ಪಾಕಿಸ್ತಾನಕ್ಕೆ ಸೇರಿದ 50 ಡ್ರೋನ್‌ಗಳನ್ನು ಭಾರತೀಯ ವಾಯುಸೇನೆ ಹೊಡೆದುರುಳಿಸಿದೆ. ಈ ಬಗ್ಗೆ ಸೇನಾ ಅಧಿಕಾರಿಗಳು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಸ್ಥಳೀಯರೊಬ್ಬರು ಮಾತನಾಡಿ, ಎಲ್ಲಾ ಪಾಕಿಸ್ತಾನಿ ಡ್ರೋನ್‌ಗಳನ್ನು ತಟಸ್ಥಗೊಳಿಸಲಾಗಿದೆ. ಜನರಲ್ಲಿ ಶಾಂತಿ ಇದೆ. ಯಾವುದೇ ಭಯವಿಲ್ಲ. ನಾವು ಭಾರತೀಯ ವಾಯುಪಡೆ ಮತ್ತು ಸೇನೆಯೊಂದಿಗೆ ಇದ್ದೇವೆ ಎಂದಿದ್ದಾರೆ.
ನಮಗೆ ಸ್ಫೋಟಗಳ ಶಬ್ದ ಕೇಳಿಸಿತು. ಆದರೆ ಯಾವುದೇ ಸ್ಫೋಟಗಳು ನಮ ಭೂಮಿಯಲ್ಲಿ ಸಂಭವಿಸಿಲ್ಲ ಎಂದು ಸ್ಥಳೀಯರೊಬ್ಬರು ಹೇಳಿದ್ದಾರೆ. ಮೇ 8 ಗುರುವಾರ ರಾತ್ರಿ ಜೈಸಲೇರ್‌ನಲ್ಲಿ ಭಾರತೀಯ ವಾಯು ರಕ್ಷಣಾ ಪಡೆಗಳು ಪಾಕಿಸ್ತಾನಿ ಡ್ರೋನ್‌ಗಳನ್ನು ತಡೆಹಿಡಿದವು.ಪಾಕಿಸ್ತಾನ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಗಳು ಉದ್ದಕ್ಕೂ ವಿವಿಧ ಸ್ಥಳಗಳಿಗೆ ಸಮೂಹ ಡ್ರೋನ್‌ಗಳನ್ನು ಕಳುಹಿಸಲು ಪ್ರಯತ್ನಿಸಿದೆ.
ಈ ವೇಳೆ ಉಧಂಪುರ, ಸಾಂಬಾ, ಜಮು, ಅಖ್ನೂರ್, ನಾಗ್ರೋಟಾ ಮತ್ತು ಪಠಾಣ್‌ಕೋಟ್ ಪ್ರದೇಶಗಳಲ್ಲಿ ಭಾರತೀಯ ಸೇನೆಯ ವಾಯು ರಕ್ಷಣಾ ಘಟಕಗಳು ನಡೆಸಿದ ದೊಡ್ಡ ಪ್ರಮಾಣದ ಪ್ರತಿ-ಕಾರ್ಯಾಚರಣೆಯ ಸಮಯದಲ್ಲಿ 50 ಕ್ಕೂ ಹೆಚ್ಚು ಡ್ರೋನ್‌ಗಳನ್ನು ಯಶಸ್ವಿಯಾಗಿ ತಟಸ್ಥಗೊಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಪಾಕಿಸ್ತಾನ ಡ್ರೋನ್‌ಗಳು ಉಡೀಸ್ :
ಪಾಕಿಸ್ತಾನಿ ಡ್ರೋನ್‌ಗಳನ್ನು ಹೊಡೆದುರುಳಿಸಲು ಭಾರತೀಯ ಭದ್ರತಾ ಪಡೆಗಳು ಐ-70 ಬಂದೂಕುಗಳು, ಶಿಲ್ಕಾ ವ್ಯವಸ್ಥೆಗಳು ಮತ್ತು ಇತರ ಸುಧಾರಿತ ಉಪಕರಣಗಳನ್ನು ಬಳಸಿದವು.
ದೇಶದ ಉತ್ತರ ಮತ್ತು ಪಶ್ಚಿಮ ಪ್ರದೇಶದ 15 ಸ್ಥಳಗಳಲ್ಲಿನ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಇಸ್ಲಾಮಾಬಾದ್ ನಡೆಸಿದ ಹೊಸ ಪ್ರಯತ್ನಗಳ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗಿದೆ, ಆದರೆ ಭಾರತೀಯ ಭದ್ರತಾ ಪಡೆಗಳು ಅವುಗಳನ್ನು ಯಶಸ್ವಿಯಾಗಿ ವಿಫಲಗೊಳಿಸಿದವು. ಭಾರತವು ಅನೇಕ ನಗರಗಳಲ್ಲಿ ಪಾಕಿಸ್ತಾನಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ಗುರಿಯಾಗಿಸಿಕೊಂಡಿತು, ಲಾಹೋರ್‌ನಲ್ಲಿರುವ ಒಂದನ್ನು ತಟಸ್ಥಗೊಳಿಸಲಾಯಿತು.
ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ, ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶೀರದಲ್ಲಿನ ಒಂಬತ್ತು ಭಯೋತ್ಪಾದಕ ನೆಲೆಗಳ ನಿಖರವಾದ, ಮತ್ತು ತೀವ್ರ ದಾಳಿಗಳನ್ನು ನಡೆಸಿತು, ಇದರಲ್ಲಿ ಜೈಶ್-ಎ-ಮೊಹಮದ್ ಭದ್ರಕೋಟೆಯಾದ ಬಹಾವಲ್ಪುರ್ ಮತ್ತು ಮುರಿಡ್ಕೆಯಲ್ಲಿರುವ ಲಷ್ಕರ್-ಎ-ತೊಯ್ಬಾಬಾದ ನೆಲೆ ಸೇರಿವೆ.