39 ಲಕ್ಷ ಕೋಟಿ ರೂ.ಗಳ ವೆಚ್ಚದ ಬಜೆಟ್ ಮಂಡನೆ

Social Share

ನವದೆಹಲಿ,ಫೆ.1- ಪ್ರಸಕ್ತ ಆರ್ಥಿಕ ವರ್ಷದಲ್ಲಿ 39.45 ಲಕ್ಷ ಕೋಟಿ ರೂ. ವೆಚ್ಚದ ಬಜೆಟನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್‍ನಲ್ಲಿಂದು ಮಂಡಿಸಿದರು.ಸತತ ನಾಲ್ಕನೆ ಬಾರಿಗೆ ಬಜೆಟ್ ಮಂಡನೆ ಮಾಡಿರುವ ಅವರು, ವೈಯಕ್ತಿಕ ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ತೆರಿಗೆ ಕಡಿತದ ಮಿತಿಯನ್ನು ಶೇ.10ರಿಂದ 14ಕ್ಕೆ ಹೆಚ್ಚಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ಸಾಮಾಜಿಕ ಭದ್ರತಾ ಪ್ರಯೋಜನಗಳನ್ನು ಕೇಂದ್ರ ಸರ್ಕಾರಿ ನೌಕರರ ಸರಿಸಮನಾಗಿ ತರಲು ಅನುಕೂಲ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.ಪ್ರಸಕ್ತ ವರ್ಷ ಶೇ.6.4ರಷ್ಟು ವಿತ್ತೀಯ ಕೊರತೆಯನ್ನು ಬಜೆಟ್‍ನಲ್ಲಿ ಪ್ರಸ್ತಾಪಿಸಲಾಗಿತ್ತು. ಅದನ್ನು ಪರಿಷ್ಕರಿಸಲಾಗಿದ್ದು. ಶೇ. 6.9ರಷ್ಟು ಎಂದು ನಿರೀಕ್ಷಿಸಲಾಗಿದೆ. 2025-26ರ ವೇಳೆಗೆ ವಿತ್ತೀಯ ಕೊರತೆ ಜಿಡಿಪಿಯ ಶೇ.4.5ರಷ್ಟಿರುವ ಅಂದಾಜನ್ನು ಕೇಂದ್ರ ಸಚಿವರು ಪ್ರಸ್ತಾಪಿಸಿದ್ದಾರೆ.
ರಾಜ್ಯ ಸರ್ಕಾರಗಳು ವಿತ್ತೀಯ ಕೊರತೆಯನ್ನು ಶೇ.4ರವರೆಗೂ ನಿಭಾಯಿಸಲು ಕೇಂದ್ರ ಸರ್ಕಾರ ಅವಕಾಶ ನೀಡಿದೆ. 50 ವರ್ಷಗಳವರೆಗೆ ಬಡ್ಡಿ ರಹಿತ ಸಾಲ ಪಡೆಯಲು ಕೇಂದ್ರ ಸಹಾಯ ನೀಡಲಿದೆ.ರಾಜ್ಯ ಸರ್ಕಾರಗಳಿಗೆ ಬಂಡವಾಳ ಹೂಡಿಕೆಗಾಗಿ ಒಂದು ಲಕ್ಷ ಕೋಟಿ ರೂ.ಗಳನ್ನು ವಿತ್ತ ಸಚಿವರು ತಮ್ಮ ಆಯವ್ಯಯದಲ್ಲಿ ಕಾಯ್ದಿರಿಸಿದ್ದಾರೆ.
ರಾಸಾಯನಿಕಗಳ ಮೇಲಿನ ಆಮದು ತೆರಿಗೆಯನ್ನು ಕಡಿತ ಮಾಡಲಾಗಿದೆ. ಸಣ್ಣ ಮತ್ತು ಮಧ್ಯಮಗಾತ್ರದ ವ್ಯವಹಾರಗಳಲ್ಲಿ ನಡೆಯುವ ಉಕ್ಕು ತ್ಯಾಜ್ಯದ ಮೇಲಿನ ಅಬಕಾರಿ ಸುಂಕ ವಿನಾಯ್ತಿಯನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಲಾಗಿದೆ.
ಸ್ಟೈನ್‍ಲೆಸ್ ಸ್ಟೀಲ್, ಹೈಸ್ಟೀಲ್ ಬಾರ್‍ಗಳ ಮೇಲಿನ ಅಬಕಾರಿ ಸುಂಕವನ್ನು ಹಿಂಪಡೆಯಲಾಗಿದೆ. ಮಿಶ್ರವಿಲ್ಲದ ಇಂಧನದ ಮೇಲೆ 2022ರ ಅಕ್ಟೋಬರ್‍ರಾನಿಂದ ಪ್ರತಿ ಲೀಟರ್ ಮೇಲೆ 2ರೂ.ಗಳ ಹೆಚ್ಚುವರಿ ಸುಂಕವನ್ನು ವಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

Articles You Might Like

Share This Article