ಹಾಂಗ್ರೆ, ಸೆ.28- ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಅದ್ಭುತ ಆರಂಭ ದೊರೆತಿದ್ದು, ಶೂಟಿಂಗ್ ವಿಭಾಗದಲ್ಲಿ ಭಾರತ ಮತ್ತೊಂದು ಚಿನ್ನದ ಪದಕ ಗೆಲ್ಲುವ ಮೂಲಕ ಪದಕ ಪಟ್ಟಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. 10 ಮೀಟರ್ ಏರ್ ಪಿಸ್ತೂಲ್‍ನಲ್ಲಿ ಭಾರತದ ಪುರುಷರ ತಂಡ ಚಿನ್ನದ ಪದಕ ಗೆದ್ದುಕೊಂಡಿದೆ. ಇನ್ನು ಮತ್ತೊಂದೆಡೆ ವುಶು ಸ್ಪರ್ಧೆಯಲ್ಲಿ ಭಾರತದ ರೋಶಿಬಿನಾ ದೇವೆ ನೌರೆಮ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ. ಸರಬ್ ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರನ್ನು ಒಳಗೊಂಡ ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡದಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನ ಗೆದ್ದಿದ್ದಾರೆ.
ಕೇವಲ ಒಂದು ಅಂಕದ ಅಂತರದಲ್ಲಿ ಚೀನಾವನ್ನು ಸೋಲಿಸುವ ಮೂಲಕ ಭಾರತ ಚಿನ್ನದ ಪದಕಕ್ಕೆ ಮುತ್ತಿಕ್ಕುವಂತೆ ಮಾಡಿದೆ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಬೇಡದ ದಾಖಲೆ ಬರೆದ ಜಸ್ಪ್ರೀತ್ ಬೂಮ್ರಾ ಸರಬ್ ಜೋತ್ ಸಿಂಗ್, ಶಿವ ನರ್ವಾಲ್ ಮತ್ತು ಅರ್ಜುನ್ ಸಿಂಗ್ ಚೀಮಾ ಅವರ ಪುರುಷರ 10 ಮೀಟರ್ ಏರ್ ಪಿಸ್ತೂಲ್ ತಂಡದಲ್ಲಿ ಒಟ್ಟು 1734 ಸ್ಕೋರ್ ಗಳಿಸುವ ಮೂಲಕ ಚಿನ್ನ ಗೆದ್ದರು.
ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಆಟೋ ಚಾಲಕ ಸೇರಿ ಮೂವರ ಬಂಧನ
ಅವರ ಗಮನಾರ್ಹ ಪ್ರದರ್ಶನವು ಕೇವಲ ಒಂದು ಅಂತರದಲ್ಲಿ ಚೀನಾವನ್ನು ಸೋಲಿಸುವ ಮೂಲಕ ತಂಡವನ್ನು ಚಿನ್ನದ ಪದಕಕ್ಕೆ ಗುರಿಯಿಟ್ಟಿತು. ಇನ್ನು ವಿಯೆಟ್ನಾಂ ಪ್ರಬಲ ಪ್ರದರ್ಶನ ನೀಡಿ ಒಟ್ಟು 1730 ಅಂಕಗಳೊಂದಿಗೆ ಕಂಚಿನ ಪದಕವನ್ನು ಪಡೆದುಕೊಂಡಿತು. 580 ಅಂಕಗಳನ್ನು ಗಳಿಸಿದ ಸರಬ್ಜೋತ್ ಐದನೇ ಸ್ಥಾನವನ್ನು ಪಡೆದುಕೊಂಡರೆ, ಅರ್ಜುನ್ 578 ಅಂಕಗಳೊಂದಿಗೆ ವೈಯಕ್ತಿಕ ಅರ್ಹತಾ ಸ್ಪರ್ಧೆಯಲ್ಲಿ ಎಂಟನೇ ಸ್ಥಾನ ಪಡೆದರು. ಇವರಿಬ್ಬರೂ ಇಂದು ನಡೆಯಲಿರುವ ಪುರುಷರ 10 ಮೀಟರ್ ಏರ್ ಪಿಸ್ತೂಲ್ ಫೈನಲ್‍ನಲ್ಲಿ ಸ್ರ್ಪಸಲು ಸಜ್ಜಾಗಿದ್ದಾರೆ.