Sunday, December 1, 2024
Homeಅಂತಾರಾಷ್ಟ್ರೀಯ | Internationalಅಮೆರಿಕದಲ್ಲಿ ಎನ್‌ಕೌಂಟರ್‌ಗೆ ಭಾರತೀಯ ಬಲಿ

ಅಮೆರಿಕದಲ್ಲಿ ಎನ್‌ಕೌಂಟರ್‌ಗೆ ಭಾರತೀಯ ಬಲಿ

ನ್ಯೂಯಾರ್ಕ್‌, ಏ. 26 (ಪಿಟಿಐ) ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಭಾರತೀಯ ಮೂಲದ ವ್ಯಕ್ತಿಯೊಬ್ಬರನ್ನು ಅಮೆರಿಕದ ಸ್ಯಾನ್‌ ಆಂಟೋನಿಯೊದಲ್ಲಿ ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ.

ಮೂಲತಃ ಉತ್ತರಪ್ರದೇಶದವರಾಗಿದ್ದ ಅಮೆರಿಕ ಪ್ರಜೆ ಸಚಿನ್‌ ಸಾಹೂ ಪೊಲೀಸರ ಗುಂಡಿಗೆ ಬಲಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ಸಾಹೂ ತನ್ನ ರೂಮ್‌ ಮೇಟ್‌ ಆಗಿದ್ದ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಪೊಲೀಸರು ಕಾರ್ಯಚರಣೆ ಕೈಗೊಂಡಿದ್ದರು.

ನಿನ್ನೆ ಆತ ಮತ್ತೆ ತನ್ನ ಮನೆಗೆ ಬಂದಿದ್ದ ಅವನ ಬರುವಿಕೆ ಬಗ್ಗೆ ನೆರೆಹೊರೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರನ್ನು ಕಂಡು ವಾಹನದಲ್ಲಿ ಪರಾರಿಯಾಗಲು ಯತ್ನಿಸಿದ ಸಾಹೂ ತನ್ನನ್ನು ತಡೆಯಲು ಬಂದ ಪೊಲೀಸರ ಮೇಲೆ ವಾಹನ ಹರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಆತನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.

ಘಟನೆಯಲ್ಲಿ ಒಬ್ಬ ಅಧಿಕಾರಿಗೆ ಗಾಯವಾಗಿದ್ದು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಇತರ ಅಧಿಕಾರಿಗೆ ಸ್ಥಳದಲ್ಲೇ ಗಾಯಗಳಿಗೆ ಚಿಕಿತ್ಸೆ ನೀಡಲಾಯಿತು. ಘಟನೆಯಲ್ಲಿ ಬೇರೆ ಯಾರಿಗೂ ಗಾಯಗಳಾಗಿಲ್ಲ. ಈ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News