ಪಾಟ್ನಾ, ಜು. 9- ಸರಿ ಸುಮಾರು 169 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ವಿಮಾನ ಇಂದು ಬೆಳಿಗ್ಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ದೆಹಲಿಗೆ ಹೊರಟ್ಟಿದ್ದ ವಿಮಾನ ಪಾಟ್ನಾದ ಜಯಪ್ರಕಾಶ್ ನಾರಾಯಣ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೆ ಸಮಯದಲ್ಲಿ ವಿಮಾನಕ್ಕೆ ಪಕ್ಷಿ ಡಿಕ್ಕಿ ಹೊಡೆದಿದೆ ಹೀಗಾಗಿ ವಿಮಾನ ತುರ್ತು ಭೂಸ್ಪರ್ಶ ಮಾಡಬೇಕಾಯಿತು ಎಂದು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕ ಕೃಷ್ಣ ಮೋಹನ್ ನೆಹ್ರಾ ಮಾಹಿತಿ ನೀಡಿದ್ದಾರೆ.
ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ, ವಿಮಾನವನ್ನು ಸ್ಥಗಿತಗೊಳಿಸಲಾಗಿರುವುದರಿಂದ ನಾವು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಎಂದು ಹೆಸರು ಬಹಿರಂಗಪಡಿಸಲು ಬಯಸಿರುವ ವಿಮಾನಯಾನ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಟ್ನಾ ವಿಮಾನ ನಿಲ್ದಾಣದ ಬಳಿಯ ಫುಲ್ವಾರಿಷರಿಫ್ ಪ್ರದೇಶದಲ್ಲಿರುವ ಕಸಾಯಿಖಾನೆಗಳು ಪಕ್ಷಿಗಳನ್ನು ಆಕರ್ಷಿಸುತ್ತವೆ. ಕಸಾಯಿಖಾನೆಗಳ ಉಪಸ್ಥಿತಿಯಿಂದಾಗಿ ವಿಮಾನ ನಿಲ್ದಾಣದ ಬಳಿ ಪಕ್ಷಿ ಚಟುವಟಿಕೆಯ ಸಮಸ್ಯೆಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ನಿಯಮಿತವಾಗಿ ರಾಜ್ಯ ಸರ್ಕಾರಕ್ಕೆ ತಿಳಿಸುತ್ತಾ ಬಂದಿದೆ.
ಬಹು ಅಡೆತಡೆಗಳು ಮತ್ತು ಅದರ ಸಣ್ಣ ರನ್‌ವೇಯಿಂದಾಗಿ ಪಾಟ್ನಾ ವಿಮಾನ ನಿಲ್ದಾಣವು ಭಾರತದ 11 ಅತ್ಯಂತ ನಿರ್ಣಾಯಕ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ.
- ಎಲ್ಪಿಜಿ ಟ್ಯಾಂಕ್ ಸ್ಫೋಟಗೊಂಡು 7 ಮಂದಿ ಸಜೀವ ದಹನ
- ಬೈಕ್ಗೆ ಕಾರು ಡಿಕ್ಕಿಯಾಗಿ ಸೇತುವೆಯಿಂದ ಬಿದ್ದು ಮಹಿಳೆ ಸಾವು
- ವಾಯು ರಕ್ಷಣಾ ಶಸ್ತ್ರಾಸ್ತ್ರ ಹಾರಾಟ ಪರೀಕ್ಷೆ ಯಶಸ್ವಿ
- ಮನೆಯಲ್ಲೇ ಎಸ್ಐಟಿಯಿಂದ ಸುಜಾತ ಭಟ್ ವಿಚಾರಣೆ
- ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ