Saturday, September 23, 2023
Homeಇದೀಗ ಬಂದ ಸುದ್ದಿಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಆರೋಪ : ಸಿಸಿಬಿಯಿಂದ ಮಾಹಿತಿ ಸಂಗ್ರಹ

ಇಂದಿರಾ ಕ್ಯಾಂಟೀನ್ ಬಾಕಿ ಬಿಲ್ ಆರೋಪ : ಸಿಸಿಬಿಯಿಂದ ಮಾಹಿತಿ ಸಂಗ್ರಹ

- Advertisement -

ಬೆಂಗಳೂರು, ಸೆ.16- ಎಂಎಲ್ಎ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಚೈತ್ರಾ ಕುಂದಾಪುರ ಹೇಳಿಕೆ ಹಿನ್ನೆಲೆಯಲ್ಲಿ ಬಿಬಿಎಂಪಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಸಿಸಿಬಿ ವಿಶೇಷ ತಂಡ ತನಿಖೆ ಕೈಗೊಂಡಿದೆ.

ಸಿಸಿಬಿ ಕಚೇರಿಗೆ ವಿಚಾರಣೆಗೆ ಆಗಮಿಸಿದ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಚೈತ್ರಾ ಆರೋಪ ಮಾಡಿದ್ದು, ಈ ಸಂಬಂಧ ಸಿಸಿಬಿ ಪೊಲೀಸರು ವಿಚಾರಣೆ ಚುರುಕುಗೊಳಿಸಿದ್ದು, ಈಗಾಗಲೇ ಒಂದು ಹಂತದ ತನಿಖೆ ಪೂರ್ಣಗೊಳಿಸಿದ್ದಾರೆ.

- Advertisement -

ಬಾಕಿ ಬಿಲ್ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಶೇಷ ತಂಡ ರಚಿಸಿದ್ದು, ಮಾಹಿತಿ ಕಲೆ ಹಾಕಲು ಮುಂದಾದ ತಂಡ ಪಾಲಿಕೆಯ ಹಿರಿಯ ಅಧಿಕಾರಿಗಳ ಬಳಿ ಮಾಹಿತಿ ಸಂಗ್ರಹಿಸಿದೆ. ಜತೆಗೆ ಇಂದಿರಾ ಕ್ಯಾಂಟಿನ್ ಬಿಲ್ ಬಿಡುಗಡೆ ಮಾಡುವ ಅಧಿಕಾರಿಗಳ ಕಾಲ್ ಡೀಟೈಲ್ ಕೂಡ ಕಲೆ ಹಾಕಿದ್ದಾರೆ.

ಮೂವರು ಉಗ್ರರ ಎನ್‌ಕೌಂಟರ್‌, ಸೇನಾ ಕಾರ್ಯಾಚರಣೆ ಯಶಸ್ವಿ

ಗೋವಿಂದ ಪೂಜಾರಿಗೆ ಸೇರಿದ ಕ್ಯಾಂಟಿನ್ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗೋವಿಂದ ಪೂಜಾರಿ ಎಷ್ಟು ವರ್ಷಗಳಿಂದ ಕ್ಯಾಂಟಿನ್ಗಳಿಗೆ ಊಟ ಸರಬರಾಜು ಮಾಡುತ್ತಿದ್ದಾರೆ, ಇದುವರೆಗೂ ಇವರಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ, ಕಳೆದ ಎರಡು ವರ್ಷಗಳಿಂದ ಎಷ್ಟು ಹಣ ಬಾಕಿ ನೀಡಬೇಕಿತ್ತು.

ಮೂರು ತಿಂಗಳಲ್ಲಿ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ ಎಂಬುದು ಸೇರಿದಂತೆ ಕ್ಯಾಂಟಿನ್ಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ಸಿಸಿಬಿ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದಾರೆ. ಹೀಗೆ ಹಲವು ಪ್ರಶ್ನೆಗಳನ್ನು ಬಿಬಿಎಂಪಿ ಅಧಿಕಾರಿಗಳಿಗೆ ಸಿಸಿಬಿ ಅಧಿಕಾರಿಗಳು ಕೇಳಿದ್ದು, ಎಲ್ಲ ಮಾಹಿತಿ ಸಂಗ್ರಹಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

#Indiracanteen, #pendingbill, #allegation,

- Advertisement -
RELATED ARTICLES
- Advertisment -

Most Popular