Tuesday, May 7, 2024
Homeರಾಜ್ಯಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ

ಹಕ್ಕು ಚಲಾಯಿಸಿದ ಇನ್ಫೊಸಿಸ್‌ ನಾರಾಯಣಮೂರ್ತಿ ಮತ್ತು ಸುಧಾಮೂರ್ತಿ

ಬೆಂಗಳೂರು,ಏ.26- ನಾನು ಎಲ್ಲರಿಗೂ ಹೇಳಲು ಬಯಸುವುದೇನೆಂದರೆ ಅರ್ಹ ಮತದಾರರೆಲ್ಲರೂ ಮನೆಯಲ್ಲೇ ಕುಳಿತುಕೊಳ್ಳಬೇಡಿ. ಮತಗಟ್ಟೆಗೆ ಬಂದು ಮತ ಚಲಾಯಿಸಿ. ಇದು ನಿಮ್ಮ ಹಕ್ಕು, ನಿಮ್ಮ ನಾಯಕನನ್ನು ಆಯ್ಕೆ ಮಾಡಿ ಎಂದು ಲೇಖಕಿ ಹಾಗೂ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಮನವಿ ಮಾಡಿದ್ದಾರೆ.

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭಗೊಂಡಿದ್ದು, ರಾಜ್ಯದ 14 ಕ್ಷೇತ್ರಗಳು ಸೇರಿದಂತೆ ದೇಶದ 88 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. 1,200ಕ್ಕೂ ಹೆಚ್ಚು ಅಭ್ಯರ್ಥಿಗಳು ಜನಾದೇಶ ಬಯಸಿದ್ದಾರೆ.

ಇನ್ಫೊಸಿಸ್‌ ಸಹ ಸಂಸ್ಥಾಪಕ ಎನ್‌.ಆರ್‌. ನಾರಾಯಣಮೂರ್ತಿ ಹಾಗೂ ರಾಜ್ಯಸಭಾ ಸದಸ್ಯೆ, ಲೇಖಕಿ ಸುಧಾಮೂರ್ತಿ ಅವರು ಬೆಂಗಳೂರಿನ ಬಿಇಎಸ್‌ ಮತಗಟ್ಟೆಯಲ್ಲಿ ಮತ ಚಲಾಯಿಸಿದರು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಿಗೆ ಹೋಲಿಸಿದರೆ ನಗರವಾಸಿಗಳು ಕಡಿಮೆ ಮತ ಚಲಾಯಿಸುತ್ತಾರೆ ಎಂದು ನಾನು ಯಾವಾಗಲೂ ಭಾವಿಸುತ್ತೇನೆ. ಯುವ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರತಿ ಐದು ವರ್ಷಗಳಿಗೊಮ್ಮೆ ನಮ್ಮ ಸಂವಿಧಾನ ನೀಡಿರುವ ಹಕ್ಕನ್ನು ಚಲಾಯಿಸುವ ಅವಕಾಶವೇ ಮತದಾನ. ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಇದು ಸುಸಂದರ್ಭ. ಇಂದು ಬಹಳ ಸಂತೋಷದ ದಿನ. ನಾವೆಲ್ಲರೂ ನಮ್ಮ ಹಕ್ಕನ್ನು ಚಲಾಯಿಸಲು ಉತ್ಸಾಹದಿಂದ ಇರಬೇಕಾದ ದಿನ ಎಂದು ತಿಳಿಸಿದ್ದಾರೆ

RELATED ARTICLES

Latest News