ಮೂಡಾ ಹಗರಣ : ಬಿಜೆಪಿ ವಿರುದ್ಧ ಕಪಿಲ್‌ ಸಿಬಲ್‌ ವಾಗ್ದಾಳಿ

ನವದೆಹಲಿ, ಸೆ.25 (ಪಿಟಿಐ) ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರ ಒಪ್ಪಿಗೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದ ಮರುದಿನ, ರಾಜ್ಯಸಭಾ ಸಂಸದ ಕಪಿಲ್‌ ಸಿಬಲ್‌ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಚುನಾಯಿತ ಸರ್ಕಾರಗಳನ್ನು ಅಸ್ಥಿರಗೊಳಿಸಲು ಮತ್ತು ಉರುಳಿಸಲು ಕಪಟ ಮಾರ್ಗಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ. ಮುಡಾ ಭೂ ಮಂಜೂರಾತಿ ಪ್ರಕರಣದಲ್ಲಿ ತಮ ವಿರುದ್ಧದ ತನಿಖೆಗೆ ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಅವರು ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಿನ್ನಡೆಯನ್ನುಂಟುಮಾಡಿದೆ. … Continue reading ಮೂಡಾ ಹಗರಣ : ಬಿಜೆಪಿ ವಿರುದ್ಧ ಕಪಿಲ್‌ ಸಿಬಲ್‌ ವಾಗ್ದಾಳಿ