Monday, April 21, 2025
Homeರಾಜ್ಯವಿಜಯನಗರದ ಶ್ರೇಷ್ಠ ಆಡಳಿತಗಾರ ಶ್ರೀ ಕೃಷ್ಣ ದೇವರಾಯರಿಗೆ ಅವಮಾನ : ಯತ್ನಾಳ್‌

ವಿಜಯನಗರದ ಶ್ರೇಷ್ಠ ಆಡಳಿತಗಾರ ಶ್ರೀ ಕೃಷ್ಣ ದೇವರಾಯರಿಗೆ ಅವಮಾನ : ಯತ್ನಾಳ್‌

Insult to the great ruler of Vijayanagara, Sri Krishna Devaraya: Yatnal

ಬೆಂಗಳೂರು,ಏ.21- ಭಾರತೀಯ ಇತಿಹಾಸದಲ್ಲಿ ಸುವರ್ಣ ಕಾಲದ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿ ಜಾಗವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಲಾಗಿದ್ದು, ಇದು ಕನ್ನಡನಾಡಿನ ಹೆಮ್ಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ಹೇಳಿದ್ದಾರೆ.

ಈ ಕುರಿತು ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ಅವರು, ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ದುಸ್ಥಿತಿ ಇದು. ಈ ಜಾಗವನ್ನು ಅಕ್ಷರಶಃ ಮಾಂಸದ ಮಾರುಕಟ್ಟೆಯಾಗಿ ಕೆಲ ಸ್ಥಳೀಯರು ಪರಿವರ್ತಿಸಿರುವುದು ಕನ್ನಡ ನಾಡಿನ ಹೆಮೆಯ ಅರಸರಾದ ಅಸಾಮಾನ್ಯ ಆಡಳಿತಗಾರ, ಅಪ್ರತಿಮ ದಂಡನಾಯಕ ಶ್ರೀ ಕೃಷ್ಣದೇವರಾಯರಿಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದ್ದಾರೆ.

ಹಿಂದೂ ದೇವಾಲಯಗಳನ್ನು ಕೆಡವಿ, ದೇಶದ ಸಂಪತ್ತನ್ನು ದೋಚಿ, ಸಾವಿರಾರು ಹಿಂದೂಗಳನ್ನು ಅಮಾನವೀಯವಾಗಿ ಕೊಂದ ಔರಂಗಜೇಬನ ಸಮಾಧಿಗೆ ಪುರಾತತ್ವ ಸರ್ವೇಕ್ಷಣಾ ಇಲಾಖೆ(ಎಎಸ್‌‍ಎಲ್‌) ತೆರಿಗೆದಾರರ ಹಣದಿಂದ ಸಂರಕ್ಷಣೆ ಮಾಡುತ್ತಿದೆ. ಆದರೆ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ,ಸಾಹಿತ್ಯ ರಂಗಗಳ ಪೋಷಕ ಸುಪ್ರಸಿದ್ದ ಶ್ರೀಕೃಷ್ಣದೇವರಾಯರ ಸಮಾಧಿಗೆ ಏಕೆ ಈ ದಿವ್ಯ ನಿರ್ಲಕ್ಷ್ಯ ಎಂದು ಪ್ರಶ್ನಿಸಿದ್ದಾರೆ.

ಇದು ಕನ್ನಡಿಗರಿಗಷ್ಟೇ ಅಲ್ಲ ರಾಷ್ಟ್ರಕ್ಕೆ ಮಾಡಿದ ಅವಮಾನ, ಮಾಂಸವನ್ನು ಮಾರುತ್ತ ಸ್ಥಳದ ಪಾವಿತ್ರ್ಯತೆಯನ್ನು ಹಾಳು ಮಾಡುತ್ತಿರುವ ಇಂತವರನ್ನು ಜಿಲ್ಲಾಡಳಿತ ಕೂಡಲೇ ಜಾಗ ಖಾಲಿ ಮಾಡಲು ಸೂಚಿಸಬೇಕು ಹಾಗೂ ಇಲ್ಲಿ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆ ಕಾಪಾಡುವ ಕೆಲಸವನ್ನು ಸರ್ಕಾರ ತುರ್ತಾಗಿ ಮಾಡಲಿ ಎಂದು ಅವರು ಆಗ್ರಹಿಸಿದ್ದಾರೆ.

RELATED ARTICLES

Latest News