Friday, November 22, 2024
Homeರಾಜ್ಯಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಪತಿ-ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ

ಬೆಳಗಾವಿ, ಡಿ.14- ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಗೆ ತಿಳಿಸಿದರು. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಪೊಲೀಸ್ ಇಲಾಖೆಯಲ್ಲಿ ಪತಿ -ಪತ್ನಿ ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ಮಾಡಿ ಕೊಡಲಾಗಿದೆ. ಪೊಲೀಸ್ ಅಧಿಕಾರಿಗಳ ಕನಿಷ್ಠ ವರ್ಗಾವಣೆಯನ್ನು ಎರಡು ವರ್ಷಗಳಿಗೆ ಹೆಚ್ಚಿಸುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ ಅವಯು ಮೊದಲು ಎರಡು ವರ್ಷವಿತ್ತು. 7 ವರ್ಷದ ಹಿಂದೆ ಅದನ್ನು ಒಂದು ವರ್ಷಕ್ಕೆ ಮಾಡಲಾಗಿದೆ. ಪೊಲೀಸ್ ವರ್ಗಾವಣೆ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಸಚಿವರು ಹೇಳಿದರು.

ಮತ್ತೊಬ್ಬ ಮಹಿಳೆಯನ್ನು ಬಲಿಪಡೆದ ಕಿಲ್ಲರ್ ಬಿಎಂಟಿಸಿ

ಇದಕ್ಕೂ ಮುನ್ನ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿ, ಪೊಲೀಸ್ ಸಬ್ ಇನ್ಸ್ಪೆಕ್ಟರ್, ಇನ್ಸ್ಪೆಕ್ಟರ್, ಡಿವೈಎಸ್ಪಿಗಳ ವರ್ಗಾವಣೆಯನ್ನು ಒಂದು ವರ್ಷಕ್ಕೆ ನಿಗದಿ ಪಡಿಸಲಾಗಿದೆ. ಒಂದು ಜಾಗಕ್ಕೆ ವರ್ಗಾವಣೆಗೊಂಡು ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿಗಳೇ ಠಾಣೆಯ ಸರಹದ್ದಿನ ಸಮಗ್ರ ಮಾಹಿತಿ ಪಡೆದು, ಕ್ರಿಮಿನಲ್ ಗುಂಡಾಗಳನ್ನೂ ಮಟ್ಟ ಹಾಕುವ ವೇಳೆಗೆ ಒಂದು ವರ್ಷ ಮುಗಿದು ಹೋಗುತ್ತದೆ. ಅದರಿಂದ ಕ್ರಿಮಿನಲ್ ಪ್ರಕರಣಗಳನ್ನು ಮಟ್ಟಹಾಕಲು ಆಗುತ್ತಿಲ್ಲ. ಹೀಗಾಗಿ ಕನಿಷ್ಠ ವರ್ಗಾವಣೆ ಅವಧಿಯನ್ನು ಎರಡು ವರ್ಷಕ್ಕೆ ಹೆಚ್ಚಿಸಬೇಕು ಎಂದು ಹೇಳಿದರು.

RELATED ARTICLES

Latest News