Saturday, February 1, 2025
Homeರಾಷ್ಟ್ರೀಯ | Nationalರಾಜ್ಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಡ್ಡಿರಹಿತ ಸಾಲ

ರಾಜ್ಯಗಳ ಮೂಲಸೌಕರ್ಯ ಅಭಿವೃದ್ಧಿಗೆ ಬಡ್ಡಿರಹಿತ ಸಾಲ

Union Budget provides ₹1.5 lakh cr. outlay for interest-free loans to States for infrastructure development

ನವದೆಹಲಿ,ಫೆ.1- ದೇಶದಲ್ಲಿರುವ ವಿವಿಧ ರಾಜ್ಯಗಳ ಮೂಲ ಸೌಕರ್ಯ ಅಭಿವೃದ್ಧಿಗಾಗಿ ಒಂದೂವರೆ ಲಕ್ಷ ಕೋಟಿ ರೂ.ಗಳ ಬಡ್ಡಿ ರಹಿತ ಸಾಲ ನೀಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ರಾಜ್ಯಗಳ ಅಭಿವೃದ್ಧಿಗೆ ಸರ್ಕಾರ ಸಿದ್ದಪಡಿಸಿರುವ ಒಂದೂವರೆ ಲಕ್ಷ ಕೋಟಿ ರೂ.ಗಳ ಬಡ್ಡಿರಹಿತ ಸಾಲ ನೀಡುವ ಯೋಜನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಭಾಷಣದಲ್ಲಿ ತಿಳಿಸಿದ್ದಾರೆ.

ಮೂಲಸೌಕರ್ಯ ಅಭಿವದ್ಧಿಗಾಗಿ ರಾಜ್ಯಗಳಿಗೆ 50 ವರ್ಷಗಳ ಬಡ್ಡಿ ರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುವುದು ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.
2025-26 ರ ಬಜೆಟ್‌ ಅನ್ನು ಪ್ರಸ್ತುತಪಡಿಸಿದ ಅವರು ಶಿಕ್ಷಣಕ್ಕಾಗಿ ಕತಕ ಬುದ್ಧಿಮತ್ತೆಯಲ್ಲಿ ಶ್ರೇಷ್ಠತೆಯ ಕೇಂದ್ರವನ್ನು ಸ್ಥಾಪಿಸಲು 500 ಕೋಟಿ ರೂ.ಗಳ ಅನುದಾನ ನಿಗದಿಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

RELATED ARTICLES

Latest News