Tuesday, May 7, 2024
Homeರಾಜ್ಯಸಿರಿಧಾನ್ಯ ಸಾವಯವ ಮೇಳ ಯಶಸ್ವಿ

ಸಿರಿಧಾನ್ಯ ಸಾವಯವ ಮೇಳ ಯಶಸ್ವಿ

ಬೆಂಗಳೂರು,ಜ.6- ನಗರದ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿರುವ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ಅರ್ಥಗರ್ಭಿತವಾಗಿ ಯಶಸ್ವಿಯಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇಳ ಉದ್ಘಾಟನೆ ಮಾಡಿದ ನಂತರ ನಿನ್ನೆ ಮೊದಲ ದಿನವೇ 60 ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಭಾಗವಹಿಸಿದ್ದಾರೆ ಎಂದರು.

61 ಸಭೆಗಳಲ್ಲಿ 23.14 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಪೈಕಿ 1,361 ಮೆಟ್ರಿಕ್ ಟನ್ ಪ್ರಮಾಣದ 5.10 ಕೋಟಿ ಮೌಲ್ಯದ 6 ಒಪ್ಪಂದಗಳಾಗಿವೆ. ಕೀನ್ಯಾ, ಕುವೈತ್, ಆಸ್ಟ್ರೇಲಿಯಾ, ಯೂರೋಪ್, ಯುಎಇ ದೇಶಗಳ ಮಾರುಕಟ್ಟೆದಾರರು ಮೇಳದಲ್ಲಿ ಭಾಗವಹಿಸಿದ್ದಾರೆ. ಏಳು ಅಂತಾರಾಷ್ಟ್ರೀಯ, 40 ಹೊರರಾಜ್ಯಗಳ ಹಾಗೂ 50 ರಾಜ್ಯದ ಮಾರುಕಟ್ಟೆದಾರರು ಸಭೆಗಳಲ್ಲಿ ಭಾಗವಹಿಸಿದ್ದಾರೆ. 97 ಮಾರುಕಟ್ಟೆ ದಾರರು, 154 ಉತ್ಪಾದಕರು ಬಿ2ಬಿ ಸಭೆಗಳಲ್ಲಿ ಭಾಗವಹಿಸಿದ್ದಾರೆ ಎಂದು ಹೇಳಿದರು.

310 ಮಳಿಗೆಗಳು ಮೇಳದಲ್ಲಿದ್ದು, 190 ಮಳಿಗೆಗಳು ಸಾವಯವ ಮತ್ತು ಸಿರಿಧಾನ್ಯ ಸಂಸ್ಥೆಗಳು, ರಫ್ತುದಾರರು, ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಸಂಸ್ಥೆಗಳು ಪಾಲ್ಗೊಂಡಿವೆ ಎಂದರು.

ಈ ಮೇಳ ಅಸಾಧರಣ ಅನುಭವ ನೀಡಿದ್ದು, ಕೃಷಿ ಮಂತ್ರಿಯಾಗಿರುವುದಕ್ಕೆ ಖುಷಿಯಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳ ರೈತರು ಹೆಚ್ಚು ಹೆಚ್ಚು ಸಿರಿಧಾನ್ಯಗಳನ್ನು ಬೆಳೆಯಬೇಕು. ಕಡಿಮೆ ಖರ್ಚು, ಕಡಿಮೆ ಸಮಯದಲ್ಲಿ ಬೆಳೆದು ಆರ್ಥಿಕ ಸ್ವಾವಲಂಬನೆ ಸಾಸಬಹುದು. ಪ್ರಸ್ತುತ ಹೆಕ್ಟೇರ್‍ಗೆ 10 ಸಾವಿರ ರೂ. ಪ್ರೋತ್ಸಾಹ ಧನ ನೀಡುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಹೇಳಿದರು.

ಸಿರಿಧಾನ್ಯದ ಆಹಾರದ ಉತ್ಪನ್ನಗಳು ಹೆಚ್ಚು ರುಚಿಕರವಾಗಿವೆ. ನವಣೆ ಮಸಾಲೆ ಬ್ರೆಡ್, ರಾಗಿ ಬ್ರೆಡ್, ಫಿಜ್ಜಾ, ಬರ್ಗರ್, ನೂಡಲ್ಸ್, ವಿವಿಧ ರೀತಿಯ ಬಿಸ್ಕತ್ತು, ಚಕ್ಕುಲಿ, ಚಿಕ್ಕಿ ಅಲ್ಲದೆ ವಿಶೇಷ ವಾಗಿ ಯುವ ಪೀಳಿಗೆ ಇಷ್ಟ ಪಡುವ ಆಧುನಿಕ ಸಿರಿಧಾನ್ಯ ಬ್ರೌನಿ, ಬಫ್ತಿನ್ಸ್, ರಾಗಿ ಚಾಕಲೇಟ್, ಜಾಮುನು ಆಕರ್ಷಕವಾಗಿವೆ ಎಂದರು.

ಈ ವರ್ಷ 16 ರಾಜ್ಯಗಳು ಭಾಗವಹಿಸಿದ್ದು, ಹೆಚ್ಚು ಅರ್ಥಪೂರ್ಣವಾಗಿದೆ. 50 ಪರಿಣಿತರು ವಿವಿಧ ವಿಷಯಗಳ ಬಗ್ಗೆ ಉಪನ್ಯಾಸ ನೀಡಿದ್ದಾರೆ ಎಂದರು. ಸಿರಿಧಾನ್ಯ ಬೆಳೆಯುವ ರೈತರಿಗೆ ಉತ್ತೇಜನ ನೀಡಲು ರೈತ ಸಿರಿ ಯೋಜನೆಯಡಿ ಹೆಕ್ಟೇರ್‍ಗೆ 10 ಸಾವಿರದಂತೆ ಒಂದು ಲಕ್ಷ ರೈತರಿಗೆ ಪೆÇ್ರೀತ್ಸಾಹ ಧನ ನೀಡಲಾಗಿದೆ ಎಂದರು.
ಗೋಷ್ಠಿಯಲ್ಲಿ ಕೃಷಿ ಆಯುಕ್ತ ಪಾಟೀಲ್, ನಿರ್ದೇಶಕ ಡಾ.ಪುತ್ರ ಹಾಗೂ ಜಲಾನಯನ ಅಭಿವೃದ್ಧಿ ಇಲಾಖೆ ನಿರ್ದೇಶಕ ಬಿ.ವೈ.ಶ್ರೀನಿವಾಸ್ ಉಪಸ್ಥಿತರಿದ್ದರು.

RELATED ARTICLES

Latest News