Homeಅಂತಾರಾಷ್ಟ್ರೀಯಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ, 27 ಮಂದಿ ಸಾವು

ಬ್ಯಾಂಕಾಕ್‌ನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ, 27 ಮಂದಿ ಸಾವು

27 Killed, 22 Critical In Massive Fire At Bangkok Bar

ಬ್ಯಾಂಕಾಕ್‌, ಜು. 12- ಥಾಯ್ಲೆಂಡ್‌ನ ರಾಜಧಾನಿ ಬ್ಯಾಂಕಾಕ್‌ನಲ್ಲಿರುವ ಪಬ್‌ವೊಂದರಲ್ಲಿ ಇಂದು ಮುಂಜಾನೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ .

ರಾತ್ರಿ ಸುಮಾರು 12 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಬಂದಿದ್ದು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.ರಕ್ಷಣಾ ಸಿಬ್ಬಂದಿ ಹಂಚಿಕೊಂಡಿರುವ ವಿಡಿಯೊಗಳಲ್ಲಿ ಪಬ್‌ನ ಮುಂಭಾಗದಿಂದ ಭಾರೀ ಜ್ವಾಲೆಗಳು ಎದ್ದಿರುವುದು, ದಟ್ಟ ಕಪ್ಪು ಹೊಗೆ ಆವರಿಸಿರುವುದು ಹಾಗೂ ಜನರು ಪ್ರಾಣ ಉಳಿಸಿಕೊಳ್ಳಲು ಹೊರಗೆ ಓಡಿಬರುತ್ತಿರುವ ದೃಶ್ಯಗಳು ಕಂಡುಬಂದಿವೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಥಾಯ್ಲೆಂಡ್‌ ಪ್ರಧಾನಿ ಅನುಟಿನ್‌ ಚಾರ್ನ್ವಿರಾಕುಲ್‌‍, ಅಗ್ನಿ ಅವಘಡದಲ್ಲಿ 27 ಮಂದಿ ಮೃತಪಟ್ಟಿದ್ದು, ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಗ್ನಿಶಾಮಕ ಸಿಬ್ಬಂದಿ ಸುಮಾರು ಅರ್ಧ ಗಂಟೆಯ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಸಂಪೂರ್ಣ ನಿಯಂತ್ರಣಕ್ಕೆ ತಂದರು.ಅಗ್ನಿ ಅವಘಡದ ನಂತರ ಪಬ್‌ನ ಒಳಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮೇಜು-ಕುರ್ಚಿಗಳು ಸೇರಿದಂತೆ ಬಹುತೇಕ ವಸ್ತುಗಳು ನಾಶವಾಗಿರುವುದು ಚಿತ್ರಗಳಲ್ಲಿ ಕಂಡುಬಂದಿದೆ.ಥಾಯ್ಲೆಂಡ್‌ನಲ್ಲಿ ಈ ಹಿಂದೆ ಕೂಡ ಇಂತಹ ಅಗ್ನಿ ದುರಂತಗಳು ಸಂಭವಿಸಿವೆ. 2022ರಲ್ಲಿ ದೇಶದ ಪೂರ್ವ ಭಾಗದ ಸಂಗೀತ ಪಬ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 14 ಮಂದಿ ಮೃತಪಟ್ಟಿದ್ದರು.

RELATED ARTICLES

Latest News