Sunday, April 12, 2026
Homeಅಂತಾರಾಷ್ಟ್ರೀಯದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ, ಎಮಿರೇಟ್ಸ್ ಕೊಚ್ಚಿಗೆ ವಿಮಾನ ವಾಪಸ್‌‍

ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್‌ ದಾಳಿ, ಎಮಿರೇಟ್ಸ್ ಕೊಚ್ಚಿಗೆ ವಿಮಾನ ವಾಪಸ್‌‍

Dubai-bound Emirates flight turns back to Kochi amid 'security incident'

ದುಬೈ, ಮಾ.16- ದುಬೈ ವಿಮಾನ ನಿಲ್ದಾಣದ ಮೇಲೆ ಮತ್ತೆ ಇರಾನ್‌ ಡ್ರೋನ್‌ ದಾಳಿ ನಡೆಸಿದೆ. ದಾಳಿಯ ಸ್ಫೋಟಕ್ಕೆ ನಿಲ್ದಾಣದ ಬಳಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ.

ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್‌ ಇಂಧನ
ಟ್ಯಾಂಕ್‌ಗೆ ಅಪ್ಪಳಿಸಿದ ನಂತರ ಬೆಂಕಿ ಕಾಣಿಸಿಕೊಂಡಿತು. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ.

ಬೆಂಕಿಯನ್ನು ನಂದಿಸಲು ದುಬೈ ನಾಗರಿಕ ರಕ್ಷಣಾ ಸಿಬ್ಬಂದಿಯನ್ನು ತಕ್ಷಣವೇ ನಿಯೋಜಿಸಲಾಗಿದೆ. ಸುತ್ತಮುತ್ತ ಸುರಕ್ಷತಾ ಕ್ರಮಗಳನ್ನು ಸಕ್ರಿಯಗೊಳಿಸಿರುವುದರಿಂದ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದುಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಡ್ರೋನ್‌ ದಾಳಿಯಿಂದ ಇಂಧನ ಟ್ಯಾಂಕ್‌ಗಳಲ್ಲಿ ಒಂದರ ಮೇಲೆ ಪರಿಣಾಮ ಬೀರಿತು ಎಂದು ದುಬೈ ಮಾಧ್ಯಮ ಕಚೇರಿ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದೆ. ದುಬೈ ನಾಗರಿಕ ರಕ್ಷಣಾ ತಂಡಗಳು ತಕ್ಷಣ ಪ್ರತಿಕ್ರಿಯಿಸಿ ಬೆಂಕಿಯನ್ನು ನಂದಿಸುವ ಕೆಲಸ ಮಾಡುತ್ತಿವೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಕಚೇರಿ ದೃಢಪಡಿಸಿದೆ.

ದುಬೈಗೆ ತೆರಳಿದ ಎಮಿರೇಟ್ಸ್ ವಿಮಾನ ವಾಪಸ್‌‍ ಕೊಚ್ಚಿಗೆ
ಕೊಚ್ಚಿಯಿಂದ ದುಬೈಗೆ ತೆರಳುತ್ತಿದ್ದ ಎಮಿರೇಟ್ಸ್ ವಿಮಾನಕ್ಕೆ ಮಾರ್ಗಮಧ್ಯೆ ಬಂದ ಸಂದೇಶದಿಂದ ಹಿಂದಿರುಗಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವಿಮಾನವು 325 ಪ್ರಯಾಣಿಕರೊಂದಿಗೆ ಬೆಳಿಗ್ಗೆ 4.30 ಕ್ಕೆ ಕೊಚ್ಚಿನ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತು. ಮಾರ್ಗಮಧ್ಯೆ, ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಠಾತ್‌ ಮುಚ್ಚುವಿಕೆಯಿಂದಾಗಿ ವಿಮಾನವನ್ನು ಹಿಂತಿರುಗಿಸಲು ನಿರ್ದೇಶಿಸಲಾಯಿತು.

ಹಾಗಾಗಿ ವಿಮಾನವು ಬೆಳಿಗ್ಗೆ 8.30 ಕ್ಕೆ ವಾಪಸ್‌‍ ಸುರಕ್ಷಿತವಾಗಿ ಇಳಿಯಿತು ಎಂದು ವಕ್ತಾರರು ತಿಳಿಸಿದ್ದಾರೆ. ದುಬೈ ನಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸುವವರೆಗೆ ಪ್ರಯಾಣಿಕರು ವಿಮಾನದಲ್ಲಿಯೇ ಇರಲು ಸೂಚಿಸಲಾಗಿದೆ. ವಿಮಾನ ನಿಲ್ದಾಣವು ಕಾರ್ಯಾಚರಣೆಯನ್ನು ಪುನರಾರಂಭಿಸಿದರೆ ಮತ್ತೆ ಪ್ರಯಾಣ ಆರಂಭಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

Latest News