Homeಅಂತಾರಾಷ್ಟ್ರೀಯಪಾಕಿಸ್ತಾನದಲ್ಲಿ ಪ್ರಯಾಣಿಕರ ರೈಲು ಹಳಿ ತಪ್ಪಿ ಐವರು ಪ್ರಯಾಣಿಕರ ಸಾವು

ಪಾಕಿಸ್ತಾನದಲ್ಲಿ ಪ್ರಯಾಣಿಕರ ರೈಲು ಹಳಿ ತಪ್ಪಿ ಐವರು ಪ್ರಯಾಣಿಕರ ಸಾವು

ಲಾಹೋರ್‌, ಅ.13- ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿ ಪ್ರಯಾಣಿಕರ ರೈಲೊಂದು ಹಳಿ ತಪ್ಪಿದ ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದು, 30 ಮಂದಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ ಸುಮಾರು 5.15ರ ವೇಳೆಗೆ ಕರಾಚಿಯಿಂದ ಪೇಶಾವರಕ್ಕೆ ತೆರಳುತ್ತಿದ್ದ ರೈಲು ಅಪಘಾತಕ್ಕೀಡಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೆಹಮಾನ್‌ ಬಾಬಾ ಎಕ್ಸ್‌ಪ್ರೆಸ್‌ ರೈಲು ಮುಲ್ತಾನ್‌ನ ಶೇರ್‌ ಶಾ ಸೇತುವೆ ಸಮೀಪ ಹಳಿ ತಪ್ಪಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಮುಲ್ತಾನ್‌ನ ನಿಷ್ಠಾರ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ಮತ್ತು ರಕ್ಷಣಾ ಸಿಬ್ಬಂದಿಯನ್ನು ಉಲ್ಲೇಖಿಸಿ ಜಿಯೋ ನ್ಯೂಸ್‌ ವರದಿ ಮಾಡಿದೆ.

ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರ ಸ್ಥಿತಿಗತಿ ಕುರಿತು ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌ ಕಳವಳ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ರೈಲು ಹಳಿ ತಪ್ಪಲು ನಿಖರವಾದ ಕಾರಣ ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಂತೆ ಪಾಕಿಸ್ತಾನ ರೈಲ್ವೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡುವ ನಿರೀಕ್ಷೆಯಿದೆ.

RELATED ARTICLES
spot_img

Latest News