ನವದೆಹಲಿ, ಮೇ 20: ವಿಶ್ವದ ಇಬ್ಬರು ಪ್ರಭಾವಶಾಲಿ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶೀಘ್ರದಲ್ಲೇ ಫ್ರಾನ್ಸ್ ನಲ್ಲಿ ಮುಖಾಮುಖಿಯಾಗಲಿದ್ದಾರೆ. ಜೂ.15 ರಿಂದ 17ರವರೆಗೆ ಫ್ರಾನ್ಸ್ ಆಯೋಜಿಸಿರುವ ಜಿ-7 ಶೃಂಗಸಭೆಯಲ್ಲಿ ಈ ಇಬ್ಬರು ನಾಯಕರು ಭಾಗವಹಿಸಲಿದ್ದಾರೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ತಮ್ಮ 80 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಕೇವಲ ಒಂದು ದಿನದ ನಂತರ ಫ್ರಾನ್‌್ಸನಲ್ಲಿ ಜಿ-7 ಸಭೆ ನಡೆಯುತ್ತಿರುವುದು ವಿಶೇಷವಾಗಿದೆ. ಈ ಶೃಂಗಸಭೆಯಲ್ಲಿ ಟ್ರಂಪ್ ಅವರು ಪ್ರಮುಖವಾಗಿ ಕೃತಕ ಬುದ್ಧಿಮತ್ತೆ, ಜಾಗತಿಕ ವ್ಯಾಪಾರ, ಭಯೋತ್ಪಾದನೆ ಹಾಗೂ ಅಪರಾಧದ ವಿರುದ್ಧದ ಹೋರಾಟದ ಬಗ್ಗೆ ಗಂಭೀರ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಫೆಬ್ರವರಿಯಲ್ಲಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಿ-7 ಶೃಂಗಸಭೆಯಲ್ಲಿ ಭಾಗವಹಿಸಲು ಆತ್ಮೀಯವಾಗಿ ಆಹ್ವಾನಿಸಿದ್ದರು. ಈ ಆಹ್ವಾನವನ್ನು ಮೋದಿ ಸ್ವೀಕರಿಸಿದ್ದರು.
ಮೋದಿ ಪ್ರವಾಸ ಮಾರ್ಚ್ ಆರಂಭದಲ್ಲೇ ದೃಢಪಟ್ಟಿದೆ ಎಂದು ಭಾರತದಲ್ಲಿರುವ ಫ್ರೆಂಚ್ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಇದರಿಂದಾಗಿ ಜೂನ್‌ನಲ್ಲಿ ಪ್ರಧಾನಿ ಮೋದಿ ಅವರು ಫ್ರಾನ್ಸ್ ಗೆ ಪ್ರಯಾಣ ಬೆಳೆಸುವುದು ಖಚಿತವಾಗಿದೆ.
ಈ ಜಿ-7 ಶೃಂಗಸಭೆಯಲ್ಲಿ ಯಾವುದೇ ಔಪಚಾರಿಕ ಅಥವಾ ನಿಜವಾದ ಒಪ್ಪಂದಗಳಿಗೆ ಸಹಿ ಹಾಕಲಾಗುವುದಿಲ್ಲ ಎಂದು ಶ್ವೇತಭವನದ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ. ಆದರೆ, ಭವಿಷ್ಯದ ದ್ವಿಪಕ್ಷೀಯ ಒಪ್ಪಂದಗಳಿಗೆ ಭದ್ರ ಬುನಾದಿ ಹಾಕಬಲ್ಲ ಜಾಗತಿಕ ಒಮ್ಮತವನ್ನು ನಿರ್ಮಿಸುವುದು ಈ ಸಭೆಯ ಮುಖ್ಯ ಉದ್ದೇಶವಾಗಿದೆ. ಪ್ರಸ್ತುತ ಜಾಗತಿಕ ಪರಿಸ್ಥಿತಿಯಲ್ಲಿ ಇರಾನ್ ಬಿಕ್ಕಟ್ಟನ್ನು ಶೃಂಗಸಭೆಯ ಕಾರ್ಯಸೂಚಿಯಲ್ಲಿ ಸೇರಿಸುವ ಸಾಧ್ಯತೆಯಿದ್ದರೂ, ಡೊನಾಲ್‌್ಡ ಟ್ರಂಪ್ ಮಾತ್ರ ವ್ಯಾಪಾರ ಮತ್ತು ಆರ್ಥಿಕತೆಗೆ ಹೆಚ್ಚಿನ ಆದ್ಯತೆ ನೀಡುವ ನಿರೀಕ್ಷೆಯಿದೆ.
