Sunday, October 5, 2025
Homeರಾಜ್ಯದೇವನಹಳ್ಳಿಯಲ್ಲಿ ಐಫೋನ್‌ ಘಟಕ ಸ್ಥಾಪನೆ

ದೇವನಹಳ್ಳಿಯಲ್ಲಿ ಐಫೋನ್‌ ಘಟಕ ಸ್ಥಾಪನೆ

iPhone unit to be set up in Devanahalli

ಬೆಂಗಳೂರು, ಅ.5- ಐಫೋನ್‌ ಮತ್ತು ಅದರ ಬಿಡಿ ಭಾಗಗಳ ತಯಾರಿಕೆಗೆ ಹೆಸರಾಗಿರುವ ಫಾಕ್ಸ್ ಕಾನ್‌ ಕಂಪನಿಯ ಭಾರತದ ಮುಖ್ಯಸ್ಥ ರಾಬರ್ಟ್‌ ವೂ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭಾನುವಾರ ಇಲ್ಲಿ ಭೇಟಿಯಾಗಿ, ಮತ್ತಷ್ಟು ಬಂಡವಾಳ ಹೂಡಿಕೆ ಹಾಗೂ ಮತ್ತಿತರ ಸಂಗತಿಗಳ ಬಗ್ಗೆ ಚರ್ಚಿಸಿದರು.

ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಬೃಹತ್‌ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ, ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ್‌, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ ಉಪಸ್ಥಿತರಿದ್ದರು.

ಫಾಕ್‌್ಸ ಕಾನ್‌ ಸಂಸ್ಥೆ ಐಫೋನ್‌ ತಯಾರಿಕೆ ಘಟಕವನ್ನು ಮತ್ತಷ್ಟು ವಿಸ್ತರಣೆ ಮಾಡುವುದಾಗಿ ಆಸಕ್ತಿ ವ್ಯಕ್ತ ಪಡಿಸಿದೆ. ಇದಕ್ಕೆ ಸಕಾರಾತವಾಗಿ ಸ್ಪಂದಿಸಿದ ಮುಖ್ಯಮಂತ್ರಿಯವರು, ಎಲ್ಲಾ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

ರಾಬರ್ಟ್‌ ವೂ ಅವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಫಾಕ್‌್ಸಕಾನ್‌ ಕಂಪನಿಯು ದೇವನಹಳ್ಳಿಯ ತನ್ನ ಘಟಕದಲ್ಲಿ ಕೈಗಾರಿಕಾ ಚಟುವಟಿಕೆ ಆರಂಭಿಸಿರುವುದು ಒಳ್ಳೆಯದು. ಇನ್ನೂ ಘಟಕದ ವಿಸ್ತರಣೆಗೆ ಅಗತ್ಯ ಇರುವ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮಾತನಾಡಿ, ದೇವನಹಳ್ಳಿಯಲ್ಲಿರುವ ಘಟಕವು ಫಾಕ್‌್ಸಕಾನ್‌ ಕಂಪನಿಯ ಎರಡನೇ ಅತಿದೊಡ್ಡ ಘಟಕವಾಗಿದೆ. ಆಪಲ್‌ ಕಂಪನಿಗೆ ಇದು ಜಾಗತಿಕ ಮಟ್ಟದಲ್ಲಿ ಮುಂಚೂಣಿ ಪೂರೈಕೆದಾರ ಸಂಸ್ಥೆಯಾಗಿದೆ. ದೇವನಹಳ್ಳಿಯಲ್ಲಿ ತಯಾರಾಗುವ ಐಫೋನ್‌ಗಳನ್ನು ಜಾಗತಿಕ ಸ್ಥರದಲ್ಲಿ ರಫ್ತು ಮಾಡಲಾಗುತ್ತಿದೆ. ಒಟ್ಟಾರೆಯಾಗಿ ಕಂಪನಿಯು ಇಲ್ಲಿ 22 ಸಾವಿರ ಕೋಟಿ ರೂ. ಹೂಡಿಕೆ ಮಾಡಿದೆ ಎಂದಿದ್ದಾರೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಆಯುಕ್ತೆ ಗುಂಜನ್‌ ಕೃಷ್ಣ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಕೂಡ ಉಪಸ್ಥಿತರಿದ್ದರು.

RELATED ARTICLES

Latest News