Sunday, December 1, 2024
Homeಇದೀಗ ಬಂದ ಸುದ್ದಿಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ, ಸಂಚಾರ ಮಾರ್ಗದಲ್ಲಿ ಬದಲಾವಣೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ, ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು, ಮಾ.25- ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಇಂದು ನಡೆಯಲಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ನಗರ ಸಂಚಾರಿ ಪೊಲೀಸರು ಕೆಲವು ಬದಲಾವಣೆಗಳನ್ನು ಮಾಡಿ ಸೂಕ್ತ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.

ಸಂಜೆ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಕ್ವಿನ್ಸ್ ರಸ್ತೆ, ಎಂಜಿ ರಸ್ತೆ, ಕಬ್ಬನ್ ರಸ್ತೆ ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೆಂಟ್ ಮಾಕ್ರ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ಬೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠ್ಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ ಮತ್ತು ನೃಪತುಂಗ ರಸ್ತೆಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧಿಸಲಾಗಿದೆ.

ನಿಲುಗಡೆ ಸ್ಥಳಗಳು:
ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ, ಬಿಎಂಟಿಸಿ ಬಸ್ ನಿಲ್ದಾಣದ ಮೊದಲನೆ ಮಹಡಿ ಮತ್ತು ಓಲ್ಡ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ (ಕಬ್ಬನ್‍ಪಾರ್ಕ್ ಒಳಭಾಗ)ಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

RELATED ARTICLES

Latest News