ಬೆಂಗಳೂರು,ಜು.29- ಕರ್ತವ್ಯ ಲೋಪದ ಆರೋದಡಿ ಅಮಾನತುಗೊಂಡ ಬಳಿಕ ಇದೀಗ 5 ಮಂದಿ ಐಪಿಎಸ್ ಅಧಿಕಾರಿಗಳ ಅಮಾನತು ರದ್ದುಪಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುರ್ಮಾ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಈ ಕುರಿತು ತಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಸಚಿವರು ಹಾಗೂ ಸರ್ಕಾರದ ಉನ್ನತ ಸ್ಥಾನದಲ್ಲಿರುವ ಅಧಿಕಾರಿಗಳ ಱತುಘಲಕ್‌ೞ ನಿರ್ಧಾರದಿಂದ ಇಂಥಾ ಘೋರ ದುರಂತ ಸಂಭವಿಸಿತು ಎಂದು ಕಿಡಿಕಾರಿದ್ದಾರೆ.
ಎಂಬ ವಾಸ್ತವ ಸತ್ಯದ ಹಿನ್ನಲೆಯಲ್ಲಿ ಜನಾಕೋಶ ಎದುರಿಸಲಾಗದೆ ಱಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲುೞ ಭಂಡತನದಿಂದ ಅಧಿಕಾರದಲ್ಲಿ ಉಳಿಯಲು ತಪ್ಪೆಸಗದ ಪೊಲೀಸ್ ಅಧಿಕಾರಿಗಳಿಗೆ ಅಮಾನತು ಶಿಕ್ಷೆ ವಿಧಿಸಿ ಹೊಣೆಗೇಡಿತನದಿಂದ ಪಾರಾಗಲು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಪ್ರಯತ್ನಿಸಿದ್ದರು. ಇದೀಗ ಗತ್ಯಂತರವಿಲ್ಲದೆ ಪ್ರಾಯಶ್ಚಿತ್ತ ಮಾಡಿಕೊಳ್ಳಲು ಅಧಿಕಾರಿಗಳ ಅಮಾನತು ರದ್ದುಗೊಳಿಸಲಾಗಿದೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಇತರರು ಅಮಾನತು ರದ್ದುಗೊಂಡ ಅಧಿಕಾರಿಗಳ ಕ್ಷಮೆಯಾಚಿಸಬೇಕು ಎಂದು ಒತ್ತಾಯ ಮಾಡಿದ್ದಾರೆ.
ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, ಹದಗೆಟ್ಟ ಕಾನೂನು ಸುವ್ಯವಸ್ಥೆಯ ನಿರಂತರ ವೈಫಲ್ಯ, ಇವೆಲ್ಲವನ್ನೂ ಮುಚ್ಚಿಕೊಳ್ಳಲು ಆಯೋಗಗಳನ್ನು ರಚಿಸುವುದು, ಪ್ರಾಮಾಣಿಕ ಅಧಿಕಾರಿಗಳ ಬಲಿ ತೆಗೆದುಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಜನರ ದಿಕ್ಕು ತಪ್ಪಿಸುವ ಕುತಂತ್ರ ನಡವಳಿಕೆಯಾಗಿದೆ ಎಂದು ವಾಗ್ದಳಿ ನಡೆಸಿದ್ದಾರೆ.
ಬೆಂಗಳೂರಿನ ಖಅಃ ವಿಜಯೋತ್ಸವದ ಸಂಭ್ರಮಾಚರಣೆಯನ್ನು ರಾಜಕೀಯ ಬಂಡವಾಳ ಮಾಡಿಕೊಳ್ಳಲು ಹೊರಟು ದೂರದೃಷ್ಟಿ ಹಾಗೂ ಜನಕಾಳಜಿ ಇಲ್ಲದ ಅವಿವೇಕಿ ನಿರ್ಧಾರ ತೆಗೆದುಕೊಂಡ ಸಿ.ಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುರ್ಮಾ ಅವರು ತಲೆದಂಡ ತಪ್ಪಿಸಿಕೊಳ್ಳಲು ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದ ಈ ಸರ್ಕಾರ ಇದೀಗ ಅವರ ಅಮಾನತ್ತನ್ನು ರದ್ದುಗೊಳಿಸಿ ಮುಖ ಮುಚ್ಚಿಕೊಳ್ಳಲು ಹೊರಟಿದೆ ಎಂದು ವಿಜಯೇಂದ್ರ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ.
- ಬೆಂಗಳೂರಿನಾದ್ಯಂತ ನಾಗರ ಪಂಚಮಿ ಸಂಭ್ರಮ
- ರಾಷ್ಟ್ರಪತಿ ಅಧಿಕಾರ ಕುರಿತ ವಿಚಾರಣೆಗೆ ಸುಪ್ರೀಂಕೋರ್ಟ್ ಸಮ್ಮತಿ
- ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ ಖರ್ಗೆ ಹೇಳಿಕೆ
- ನಟಿ ರಮ್ಯಾ ದೂರಿನ ಬಗ್ಗೆ ಡಿಸಿಪಿ ನೇತೃತ್ವದಲ್ಲಿ ತನಿಖೆ
- ಚಿಕ್ಕಪ್ಪನ ಮನೆಯಲ್ಲೇ ಕಳವು ಆರೋಪಿತೆ ಸೇರಿ ನಾಲ್ವರ ಸೆರೆ, 65 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ