ಬೆಂಗಳೂರು,ಫೆ.21- ಸರ್ಕಾರಕ್ಕೆ ಮುಜುಗರ ಸೃಷ್ಟಿಸಿರುವ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಜಿಪಿ ರೂಪ ಮೌದ್ಗಿಲ್ ಅವರನ್ನು ರಾಜ್ಯ ಸರ್ಕಾರ ಯಾವುದೇ ಕ್ಷಣದಲ್ಲೂ ಎತ್ತಂಗಡಿ ಮಾಡಲಿದೆ. ವರ್ಗಾವಣೆ ಮಾಡಿದರೂ ಇಬ್ಬರಿಗೂ ಸದ್ಯಕ್ಕೆ ಯಾವುದೇ ಸ್ಥಳಕ್ಕೆ ನಿಯೋಜನೆ ಮಾಡದೆ ರಜೆ ತೆಗೆದುಕೊಳ್ಳಲು ಸೂಚನೆ ನೀಡಲಾಗುತ್ತದೆ.
ಮುಜರಾಯಿ ಇಲಾಖೆ ಆಯುಕ್ತೆ ರೋಹಿಣಿ ಸಿಂಧೂರಿ ಹಾಗೂ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರೂಪ ಮೌದ್ಗಿಲ್ ಅವರನ್ನು ಇಂದು ಸಂಜೆಯೊಳಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಗ್ಯಾಂಗ್‍ಸ್ಟರ್ ಬಿಷ್ಣೋಯ್ ಅಡ್ಡೆಗಳ ಮೇಲೆ NIA ದಾಳಿ
ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಇಬ್ಬರನ್ನು ವರ್ಗಾವಣೆಗೊಳಿಸಿ ರಜೆ ಮೇಲೆ ತೆರಳಲು ಸೂಚನೆ ನೀಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಒತ್ತಡ ಹಾಕಿದ್ದಾರೆ.
ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಸಿಎಂ ಬೊಮ್ಮಾಯಿ ಅವರು, ರೂಪ ಮೌದ್ಗಿಲ್ ಮತ್ತು ರೋಹಿಣಿ ಸಿಂಧೂರಿಗೆ ವರ್ಗಾವಣೆ ಬಿಸಿ ಮುಟ್ಟಿಸಲಿದ್ದಾರೆ.
IPS, Roopa Moudgil, IAS, Rohini Sindhuri, Notices issued,