ನೀರಾವರಿ ಯೋಜನೆಗಳಿಗೆ ಪರಿಹಾರ ನೀಡಲು ಹಣಕಾಸಿನ ಸಮಸ್ಯೆ ಇಲ್ಲ : ಮಾಧುಸ್ವಾಮಿ

Social Share

ಬೆಳಗಾವಿ,ಡಿ.27-ನೀರಾವರಿ ಯೋಜನೆಗಳಿಗೆ ಪರಿಹಾರ ನೀಡಲು ಹಣಕಾಸಿನ ಸಮಸ್ಯೆ ಇಲ್ಲವೇ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸ್ಪಷ್ಟಪಡಿಸಿದರು.

ಶಾಸಕ ಈಶ್ವರ್ ಬಿ.ಖಂಡ್ರೆ ಅವರು, ಈ ಹಿಂದೆ ನೀರಾವರಿ ಯೋಜನೆಗಳಿಗೆ ಭೂಸ್ವಾೀಧಿನ ಮಾಡಿಕೊಳ್ಳುವ ವೇಳೆ ನೂರೆಂಟು ಸಮಸ್ಯೆಗಳು ಉಂಟಾಗಿ ಯೋಜನೆ ವಿಳಂಬವಾಗುತ್ತಿತ್ತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂಸ್ವಾೀಧಿನಕ್ಕಾಗಿ ವಿಶೇಷ ಅನುದಾನವನ್ನು ಮೀಸಲಿಟ್ಟಿದ್ದಾರೆ. ಹೀಗಾಗಿ ಅನುದಾನದ ಸಮಸ್ಯೆ ಉದ್ಭವವಾಗುವುದಿಲ್ಲ ಎಂದು ಹೇಳಿದರು.

ಬೀದರ್ ಜಿಲ್ಲೆ ಮಾಂದ್ರ ನದಿಪಾತ್ರದಲ್ಲಿ 4.8 ಟಿಎಂಸಿ ನೀರಿನ ಲಭ್ಯತೆ ಇದೆ. ಇಲ್ಲಿ ರೈತರಿಗೆ ತೊಂದರೆಯಾಗದಂತೆ ಪ್ರವಾಹ ಬಂದಾಗ ರೈತರ ಜಮೀನುಗಳಿಗೆ ನೀರು ನುಗ್ಗಿ ಹಾನಿಗೊಳ್ಳಲಾಗುತ್ತದೆ. ಇದಕ್ಕೆ ಅಗತ್ಯವಿರುವ ಗೇಟ ಅಳವಡಿಕೆ ಸೇರಿದಂತೆ ಕೆಲವು ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಆಶ್ವಾಸನೆ ನೀಡಿದರು.

ಸರ್ಕಾರದ ಮಾರ್ಗಸೂಚಿಗೆ ಜನ ಡೋಂಟ್ ಕೇರ್

ಮಂಡ್ಯ ಜಿಲ್ಲೆ ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಪೂರಿಗಾಲಿ ಏತನೀರಾವರಿ ಯೋಜನೆಗೆ ಪರಮ ಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ನಾಮಕರಣ ಮಾಡಬೇಕೆಂದು ಶಾಸಕ ಡಾ.ಕೆ.ಅನ್ನದಾನಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಾಧುಸ್ವಾಮಿ, ಯಾವುದೇ ನೀರಾವರಿ ಯೋಜನೆಗಳಿಗೆ ನಾಮಕರಣ ಮಾಡಬೇಕಾದರೆ ಆಯಾ ನೀರಾವರಿ ನಿಗಮದ ಆಡಳಿತ ಮಂಡಳಿ ತೀರ್ಮಾನಿಸಬೇಕು. ಅದೇ ರೀತಿ ಪೂರಿಗಾಲಿ ಏತನೀರಾವರಿ ಯೋಜನೆಗೆ ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿಗಳ ಹೆಸರಿಡುವ ಪ್ರಸ್ತಾವನೆ ಇದೆ. ಕಾವೇರಿ ನಿಗಮದವರು ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಬೇಕು. ನಂತರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಿ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.

ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗಳಲ್ಲಿ ಮಾಕ್ ಡ್ರಿಲ್

ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ವಿವಿಧೆಡೆ ಕೆರೆಗಳಿಗೆ ತುಂಗಭದ್ರ ನದಿಯಿಂದ ನೀರು ತುಂಬಿಸಬೇಕೆಂದು ಶಾಸಕ ವೆಂಕಟರಾವ್ ನಾಡಗೌಡ ಅವರು ಜಲಸಂಪನ್ಮೂಲ ಸಚಿವರ ಗಮನ ಸೆಳೆದರು.
ಸಚಿವ ಗೋವಿಂದ ಕಾರಜೋಳ ಪರವಾಗಿ ಉತ್ತರಿಸಿದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ, ವಿಸ್ತೃತ ವರದಿ ಬಂದ ನಂತರ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

irrigation, projects, fund, Minister, Madhuswamy,

Articles You Might Like

Share This Article