Friday, November 22, 2024
Homeರಾಜ್ಯಕಾಂಗ್ರೆಸ್ಸಿಗರನ್ನು ಮಾತ್ರ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ

ಕಾಂಗ್ರೆಸ್ಸಿಗರನ್ನು ಮಾತ್ರ ಟಾರ್ಗೆಟ್ ಮಾಡಿ ಐಟಿ ದಾಳಿ ಮಾಡಲಾಗುತ್ತಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಡಿ.10- ಕಾಂಗ್ರೆಸ್‍ನವರನ್ನೇ ಗುರಿಯಾಗಿಸಿಕೊಂಡು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ನಿಜಲಿಂಗಪ್ಪನವರ ಜನ್ಮ ದಿನಾಚರಣೆ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಐಟಿ ಅಧಿಕಾರಿಗಳು ಕಾಂಗ್ರೆಸ್‍ನವರ ಮನೆಗಳ ಮೇಲೆ ದಾಳಿ ಮಾಡುವಂತೆ ಬಿಜೆಪಿಯವರ ಮನೆಗಳ ಮೇಲೆ ಏಕೆ ದಾಳಿ ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು. ಜಾರ್ಖಂಡ್ ಸಂಸದರ ಮನೆಯಲ್ಲಿ ಐಟಿ ದಾಳಿಯಾಗಿ ಸಾಕಷ್ಟು ಹಣ ದೊರೆತಿದ್ದು, ಅಲ್ಪಸಂಖ್ಯಾತರಿಗೆ ಆರ್ಥಿಕ ಸೌಲಭ್ಯವಿಲ್ಲವೆನ್ನುವ ಕಾಂಗ್ರೆಸ್‍ನವರ ಮನೆಯಲ್ಲಿಯೇ ಅಪಾರ ಹಣ ದೊರೆಯುತ್ತಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಸಿದ ಸಿಎಂ, ಯಾರ ಬಳಿ ಬೇನಾಮಿ ಹಣ ದೊರೆತರೂ ಅದು ಕಾನೂನು ರೀತಿ ತಪ್ಪು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲೇಬೇಕು ಎಂದರು.

ಆದರೆ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿಗಳನ್ನು ಮಾಡಲಾಗುತ್ತಿದೆ. ಬಿಜೆಪಿ ಪಕ್ಷದವರ ಮೇಲೆ ದಾಳಿಗಳು ಆಗುತ್ತಿಲ್ಲ. ಬಿಜೆಪಿಯವರ ಮನೆಗಳ ಮೇಲೂ ಐಟಿ ದಾಳಿ ನಡೆದರೆ ಬೇನಾಮಿ ಹಣ ದೊರೆಯಬಹುದು ಎಂದು ಹೇಳಿದರು.

ನಾಳೆಯಿಂದ ಮತ್ತಷ್ಟು ರಂಗೇರಲಿದೆ ಬೆಳಗಾವಿ ಅಧಿವೇಶನ

ಬಿಜೆಪಿಯವರ ಮನೆಗಳ ಮೇಲೆ ದಾಳಿ ಮಾಡಿದರೆ ಬೇಕಾದಷ್ಟು ಹಣ ಸಿಗಬಹುದು ಎಂದ ಅವರು, ಕರ್ನಾಟಕದಿಂದ ಕಾಂಗ್ರೆಸ್‍ನ ರಾಹುಲ್ ಗಾಂಧಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬುದರ ಬಗ್ಗೆ ಸಿದ್ದರಾಮಯ್ಯ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಹಾಗೆಯೇ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರಿಗೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೂ ಮುಖ್ಯಮಂತ್ರಿ ಉತ್ತರಿಸಲಿಲ್ಲ.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ, ಐವತ್ತು ವರ್ಷಗಳ ಕಾಲ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ತೊಡಗಿದ್ದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದರು. ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣವಾದ ಬಳಿಕ ಎಸ್.ನಿಜಲಿಂಗಪ್ಪನವರು ಮೊದಲ ಮುಖ್ಯಮಂತ್ರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಅವರು ಮಹಾತ್ಮಾ ಗಾಂಧಿ ಹಾಗೂ ವಿನೋಬಾ ಭಾವೆಯವರ ಆದರ್ಶಗಳಿಂದ ಪ್ರೇರಿತರಾಗಿದ್ದರು, ಕರ್ನಾಟಕದ ಏಕೀಕರಣದಲ್ಲಿ ಭಾಗಿಯಾಗಿದ್ದರು.

ಅಪರೂಪದ ‘ರೆಡ್ ಸ್ಟ್ರೆಟ್’ ಸೆರೆ ಹಿಡಿದ ಯುರೋಪಿಯನ್ ಸ್ಪೇಸ್ ಏಜೆನ್ಸಿ

ರೈತರ ಒಳಿತಿಗಾಗಿ ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಿದ್ದರು. ಅವಿಭಜಿತ ಕಾಂಗ್ರೆಸ್‍ನ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ ಆದರ್ಶಗಳು ಎಲ್ಲರಿಗೂ ದಾರಿದೀಪವಾಗಲಿ ಎಂದು ಹಾರೈಸಿದರು. ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

RELATED ARTICLES

Latest News