ಕೋಲ್ಕತಾ.ಏ.13- ವಕ್ಫ್ ವಿರೋಧಿ ಪ್ರತಿಭಟನೆಯಲ್ಲಿ ಮೂವರು ನಾವನ್ನಪ್ಪಿದ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಸೂಚಿಸಿರುವ ಕೊಲ್ಕತ್ತಾ ಹೈಕೋರ್ಟ್, ಇಂತಹ ವಿಚಾರಗಳಲ್ಲಿ ಸಾಂವಿಧಾನಿಕ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮಾಲ್ಟಾ, ಮುರ್ಷಿದಾಬಾದ್, ದಕ್ಷಿಣ 24 ಪರಗಣ ಮತ್ತು ಹೂಗ್ಲಿ ಜಿಲ್ಲೆಗಳಲ್ಲಿ ನಿನ್ನೆ ವಕ್ಫ್ ತಿದ್ದುಪಡಿ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂನಾಚಾರ ಭುಗಿಲೆದ್ದಿದ್ದರಿಂದ ಪೊಲೀಸ್ ವ್ಯಾನ್ ಗಳು ಸೇರಿದಂತೆ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ಮಾತ್ರವಲ್ಲ ಪ್ರತಿಭಟನಾಕಾರರ ಆಕ್ರೋಶಕ್ಕೆ ಮೂವರು ವ್ಯಕ್ತಿಗಳು ಬಲಿಯಾಗಿದ್ದರು.
ಭದ್ರತಾ ಪಡೆಗಳ ಮೇಲೆ ಕಲ್ಲುಗಳನ್ನು ಎಸೆಯಲಾಯಿತು ಮತ್ತು ರಸ್ತೆಗಳನ್ನು ನಿರ್ಬಂಧಿಸಲಾಯಿತು. ಪ್ರತಿಯೊಬ್ಬ ನಾಗರಿಕನಿಗೂ ಬದುಕುವ ಹಕ್ಕಿದೆ ಮತ್ತು ಪ್ರತಿಯೊಬ್ಬ ನಾಗರಿಕನ ಜೀವನ ಮತ್ತು ಆಸ್ತಿಯನ್ನು ಸುರಕ್ಷಿತವಾಗಿಡುವುದು ರಾಜ್ಯದ ಜವಾಬ್ದಾರಿಯಾಗಿದೆ ಎಂದು ಹೈಕೋರ್ಟ್ ಒತ್ತಿಹೇಳಿದೆ.
ಜನರ ಸುರಕ್ಷತೆ ಮತ್ತು ಭದ್ರತೆ ಅಪಾಯದಲ್ಲಿರುವಾಗ ನಾಂವಿಧಾನಿಕ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿರಲು ಮತ್ತು ತಾಂತ್ರಿಕ ರಕ್ಷಣೆಯಲ್ಲಿ ಸಿಲುಕಲು ಸಾಧ್ಯವಿಲ್ಲ.
ನಮಯಕ್ಕೆ ಸರಿಯಾಗಿ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ ಎಂದು ತೋರುವುದರಿಂದ ಈ ಹಿಂದೆ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜನೆಯು ಪರಿಸ್ಥಿತಿಯನ್ನು ತಹಬದಿಗೆ ತರಬಹುದಿತ್ತು ಎಂದು ನ್ಯಾಯಾಲಯ ಹೇಳಿದೆ. ಮಾತ್ರವಲ್ಲ, ಈ ಕೂಡಲೇ ಸೂಕ್ಷ್ಮ ಪ್ರದೇಶಗಳಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ನ್ಯಾಯಲಯ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.