ಜಮ್ಮು, ಫೆ.12- ಶುಕ್ರವಾರ ಬಂಡಿಪೋರಾ ಪ್ರದೇಶದಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಾವಿಗೆ ಕಾರಣವಾಗಿ, ನಾಲ್ವರಿಗೆ ಗಾಯಗಳಾದ ಭಯೋತ್ಪಾದಕ ದಾಳಿಯನ್ನು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿಹ್ನಾ ಖಂಡಿಸಿದ್ದಾರೆ.
ಟ್ವೀಟ್ ಮಾಡಿರುವ ಅವರು, ನಮ್ಮ ಭದ್ರತಾ ಸಿಬ್ಬಂದಿಯ ಮೇಲಿನ ಘೋರ ಭಯೋತ್ಪಾದಕ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ಹುತಾತ್ಮರಾದ ಪೊಲೀಸ್ ಅಧಿಕಾರಿ ಜುಬೇರ್ ಅಹ್ಮದ್ ಶಾ ಅವರ ಶೌರ್ಯಕ್ಕೆ ವಂದಿಸುತ್ತೇನೆ. ನಾವು ಯಾವುದನ್ನು ಮರೆಯುವುದಿಲ್ಲ.
ಪ್ರತಿಯೊಂದು ಹನಿ ಕಣ್ಣೀರಿಗೂ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದು. ಮೃತರ ಕುಟುಂಬಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಲ್ಲದೆ, ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.
ಶುಕ್ರವಾರ ಸಂಜೆ ಉತ್ತರ ಕಾಶ್ಮೀರದ ಜಿಲ್ಲೆಯ ನಿಶಾತ್ ಪಾರ್ಕ್ ಬಳಿ ಗಸ್ತು ತಿರುಗುತ್ತಿದ್ದ ಪೊಲೀಸರ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ದಾಳಿಯಲ್ಲಿ ಐವರು ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ತಕ್ಷಣವೇ ಭದ್ರತಾ ಅಧಿಕಾರಿಗಳು ಆ ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
