ನಾಳೆ ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ

Social Share

ಬೆಂಗಳೂರು,ಜ.20- ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ನಾಳೆ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲ್ಬುರ್ಗಿಗೆ ಆಗಮಿಸುವ ಅವರು ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ.

ಬಳಿಕ ಶ್ರೀ ಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವರು. ಜ್ಞಾನಯೋಗಾಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಮಹಾಸ್ವಾಮೀಜಿ ಈ ಸಂದರ್ಭದಲ್ಲಿ ಹಾಜರಿರುವರು.

ದಕ್ಷಿಣ ಸಿಯೋಲ್ ಬೆಂಕಿ ಅವಗಡ, 500ಕ್ಕೂ ಹೆಚ್ಚು ಜನರ ಸ್ಥಳಾಂತರ

ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನಕೆ ಚಾಲನೆ ನೀಡಲಿದ್ದಾರೆ. ಮತದಾರರ ಮನೆಮನೆಗೆ ಭೇಟಿ, ಕರಪತ್ರ ವಿತರಣೆ, ಗೋಡೆ ಬರಹ, ಮಿಸ್ಡ್ ಕಾಲ್ ಸದಸ್ಯತ್ವ ಅಭಿಯಾನದಲ್ಲೂ ಭಾಗವಹಿಸುವರು.

ಬಳಿಕ ಸಿಂಧಗಿಗೆ ತೆರಳಲಿರುವ ಅಲ್ಲಿ ಆರ್.ಡಿ.ಕಾಲೇಜು ಮುಂಭಾಗದ ಚೌಧರಿ ಲೇಔಟ್‍ನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರು ಕಲ್ಬುರ್ಗಿಯಿಂದ ದೆಹಲಿಗೆ ಹಿಂತಿರುಗಲಿದ್ದಾರೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ತಿಳಿಸಿದ್ದಾರೆ.

J P Nadda, visit, poll-bound, Karnataka,

Articles You Might Like

Share This Article