ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ : ಶೆಟ್ಟರ್

ಬೆಳಗಾವಿ, ಏ.5- ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯನವರು ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹೇಳಿದರು. ಇಲ್ಲಿನ ಖಾಸಗಿ ಹೋಟೆಲ್ನಲ್ಲಿ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ಅವರಿಗೆ ಸಿಎಂ ಕುರ್ಚಿ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುವುದು ಗ್ಯಾರಂಟಿ ಎಂದು ಹೇಳಿದರು. ಸಿದ್ದರಾಮಯ್ಯನವರು ಇದು ನನ್ನ … Continue reading ಸಿದ್ದರಾಮಯ್ಯ ಸಿಎಂ ಸ್ಥಾನ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ : ಶೆಟ್ಟರ್